ADVERTISEMENT

ದೇವನಳ್ಳಿ ಗ್ರಾ.ಪಂ: ಅವಿಶ್ವಾಸ ನಿರ್ಣಯ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 13:26 IST
Last Updated 17 ಆಗಸ್ಟ್ 2022, 13:26 IST

ಶಿರಸಿ: ತಾಲ್ಲೂಕಿನ ದೇವನಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಧುಮತಿ ನಾಯ್ಕ ಅವರ ವಿರುದ್ಧ ಬುಧವಾರ ನಡೆದ ಸಭೆಯಲ್ಲಿ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದರು.

ಉಪವಿಭಾಗಾಧಿಕಾರಿ ದೇವರಾಜ್ ಆರ್. ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಹಾಲಿ ಅಧ್ಯಕ್ಷರನ್ನು ಹುದ್ದೆಯಿಂದ ಪದಚ್ಯುತಿ ಗೊಳಿಸಲು ಸದಸ್ಯರು ನಿರ್ಣಯ ಕೈಗೊಂಡರು. ಅವಿಶ್ವಾಸಮತ ನಿರ್ಣಯದ ಪರವಾಗಿ 7 ಹಾಗೂ ವಿರುದ್ಧ 2 ಮತಗಳು ಬಿದ್ದಿದ್ದವು.

9 ಸದಸ್ಯ ಬಲದ ಗ್ರಾಮ ಪಂಚಾಯ್ತಿಯಲ್ಲಿ ಅಧ್ಯಕ್ಷ ಹುದ್ದೆ ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಾಗಿದೆ. ಬಿಜೆಪಿ ಬೆಂಬಲಿತ ಮಧುಮತಿ ಅಧ್ಯಕ್ಷರಾಗಿದ್ದು ಅವರು ದೂರುಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕೆಲವು ದಿನದ ಹಿಂದೆ ಸದಸ್ಯರು ಉಪವಿಭಾಗಾಧಿಕಾರಿ ಅವರಿಗೆ ದೂರು ಸಲ್ಲಿಸಿ, ಅವಿಶ್ವಾಸ ನಿರ್ಣಯಕ್ಕೆ ಅವಕಾಶ ಕೊರಿದ್ದರು.

ADVERTISEMENT

‘ಹಾಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮತ ನಿರ್ಣಯ ಆಗಿರುವುದರ ಕುರಿತು ಜಿಲ್ಲಾಧಿಕಾರಿಗೆ ವರದಿ ನೀಡಲಾಗುವುದು. ಹೊಸ ಅಧ್ಯಕ್ಷರ ಆಯ್ಕೆಗೆ ಅವರು ದಿನ ನಿಗದಿಪಡಿಸಲಿದ್ದಾರೆ’ ಎಂದು ಉಪವಿಭಾಗಾಧಿಕಾರಿ ದೇವರಾಜ್ ಆರ್. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.