ಶಾಸಕ ಶಿವರಾಮ ಹೆಬ್ಬಾರ
ಯಲ್ಲಾಪುರ: ಶಾಸಕ ಶಿವರಾಮ ಹೆಬ್ಬಾರ ಭಾವಚಿತ್ರ ಬಳಸಿ, ಆಕ್ಷೇಪಾರ್ಹ ರೀತಿಯ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಸೋಮವಾರ ರಾತ್ರಿ ಸೋಮು ವೈ.ಎಲ್.ಪಿ ಎಂಬುವವರನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಕಮಲ ಚಿಹ್ನೆಯಲ್ಲಿ ಗೆದ್ದಿದ್ದೀರಿ. ನೈತಿಕತೆ ಇದ್ದರೆ ಬಿಜೆಪಿ ಬೆಂಬಲಿತ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಅಭ್ಯರ್ಥಿಗೆ ಮತ ನೀಡಿ. ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಚುನಾವಣೆಗೆ ಸಿದ್ಧರಾಗಿ’ ಎಂಬ ಬರಹದೊಂದಿಗೆ ಬೆದರಿಕೆ ಒಡ್ಡುವ ಸಾಲುಗಳನ್ನು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.