ಶಿರಸಿ:‘ಯಾರಿಗೆ ಯಾರೂ ಅನಿವಾರ್ಯವಲ್ಲ. ಅಧಿಕಾರ ಯಾರೊಬ್ಬರಿಗೂ ಶಾಶ್ವತವಲ್ಲ. ಪರಿಸ್ಥಿತಿ ಬದಲಾದಂತೆ ಅದಕ್ಕೆ ತಕ್ಕ ಬದಲಾವಣೆ ನಡೆದರೆ ಅಚ್ಚರಿ ಪಡಬೇಕಿಲ್ಲ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯಾವುದೇ ವ್ಯವಸ್ಥೆಗೆ ತಾನೇ ಅನಿವಾರ್ಯ ಎಂಬ ಕಲ್ಪನೆಯೇ ತಪ್ಪು’ ಎಂದರು.
‘ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಪಕ್ಷದ ಸಂಘಟನೆ ದೃಷ್ಟಿಯಿಂದ, ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕೈಗೊಂಡ ಪ್ರಯೋಗ ಎಂದು ಭಾವಿಸಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.