ಕಾರವಾರ: ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿ ಗೌಡ ಅವರ ಅಂತ್ಯಕ್ರಿಯೆ ಮಂಗಳವಾರ ಅಂಕೋಲಾ ತಾಲ್ಲೂಕು ಹೊನ್ನಳ್ಳಿಯ ಅವರ ಕೃಷಿ ಜಮೀನಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಅಂತ್ಯಕ್ರಿಯೆಗೂ ಮುನ್ನ ಸಶಸ್ತ್ರ ಪೊಲೀಸ್ ಮೀಸಲು ಪಡೆಯ ಸಿಬ್ಬಂದಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು. ರಾಷ್ಟ್ರಗೀತೆ ಮೊಳಗಿಸಿದರು. ಕಾರವಾರ ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೇರಿ ಹಲವು ಗಣ್ಯರು ಅಂತಿಮ ದರ್ಶನ ಪಡೆದರು. ಚಿತೆಗೆ ಪುತ್ರ ಸುಬ್ರಾಯ ಗೌಡ ಅವರು ಅಗ್ನಿಸ್ಪರ್ಶ ಮಾಡಿದರು.
‘ಹೊನ್ನಳ್ಳಿ ಗ್ರಾಮದಲ್ಲಿ ಬಸ್ ತಂಗುದಾಣ ಸ್ಥಾಪಿಸಲು ಕೋರಿದ್ದ ತುಳಸಿ ಗೌಡ ಅವರ ಬೇಡಿಕೆ ಈಡೇರಿಸಲಾಗುವುದು. ತಂಗುದಾಣಕ್ಕೆ ಅವರ ಹೆಸರು ಇಡಲಾಗುವುದು. ಅವರ ಮೊಮ್ಮಗನಿಗೆ ಉದ್ಯೋಗ ನೀಡಲಾಗುವುದು’ ಎಂದು ಶಾಸಕ ಸತೀಶ ಸೈಲ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.