ADVERTISEMENT

ಡಿ.1ರಿಂದ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್: ಸಚಿವ ಹೆಬ್ಬಾರ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 15:31 IST
Last Updated 1 ನವೆಂಬರ್ 2021, 15:31 IST
ಶಿವರಾಮ ಹೆಬ್ಬಾರ
ಶಿವರಾಮ ಹೆಬ್ಬಾರ   

ಕಾರವಾರ: ‘ಪಿಂಚಣಿದಾರರಿಗೆ ಅನುಕೂಲವಾಗುವಂತೆ ಹೋಬಳಿ ಮಟ್ಟದಲ್ಲಿ ಡಿ.1ರಿಂದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲು ಸೂಚನೆ ನೀಡಲಾಗಿದೆ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಗ್ರಾಮೀಣ ಭಾಗದಲ್ಲಿರುವ ಫಲಾನುಭವಿಗಳಿಗೂ ಸೌಲಭ್ಯಗಳು ಸೂಕ್ತ ರೀತಿಯಲ್ಲಿ ಸಿಗಬೇಕು ಎಂಬ ಉದ್ದೇಶವು ರಾಜ್ಯ ಸರ್ಕಾರದ್ದಾಗಿದೆ. ಹಾಗಾಗಿ ಪಿಂಚಣಿ ಅದಾಲತ್ ಆಯೋಜಿಸಲು ತಹಶೀಲ್ದಾರರಿಗೆ ತಿಳಿಸಲಾಗಿದೆ. ಅವರೇ ಅದರ ನೇತೃತ್ವ ವಹಿಸಲಿದ್ದಾರೆ’ ಎಂದರು.

‘ಕಳೆದ ತಿಂಗಳು ಹಮ್ಮಿಕೊಳ್ಳಲಾದ ಕಾರ್ಮಿಕ ಅದಾಲತ್‌ನಿಂದ ರಾಜ್ಯದಲ್ಲಿ ಹಲವು ವರ್ಷಗಳಿಂದ ಬಾಕಿಯಿದ್ದ 2.61 ಲಕ್ಷ ಅರ್ಜಿಗಳಲ್ಲಿ 2.38 ಲಕ್ಷ ಅರ್ಜಿಗಳ ವಿಲೇವಾರಿ ಆಗಿದೆ. ಕೇವಲ 23 ಸಾವಿರ ಅರ್ಜಿಗಳು ಈಗ ವಿಲೇವಾರಿ ಆಗಬೇಕಾಗಿದ್ದು, ಅವುಗಳಲ್ಲಿ ಹಲವು ನ್ಯಾಯಾಲಯದಲ್ಲಿವೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.