ADVERTISEMENT

ಜೊಯಿಡಾ | ಅರ್ಹರು ಪಿಂಚಣಿಗೆ ಅರ್ಜಿ ಸಲ್ಲಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 6:53 IST
Last Updated 13 ಸೆಪ್ಟೆಂಬರ್ 2025, 6:53 IST
ಜೊಯಿಡಾದಲ್ಲಿ ಶುಕ್ರವಾರ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಶಾಸಕ ಆರ್.ವಿ ದೇಶಪಾಂಡೆ ಅವರು ಅರ್ಹ ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಿದರು
ಜೊಯಿಡಾದಲ್ಲಿ ಶುಕ್ರವಾರ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಶಾಸಕ ಆರ್.ವಿ ದೇಶಪಾಂಡೆ ಅವರು ಅರ್ಹ ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಿದರು   

ಜೊಯಿಡಾ: ಪಂಚಗ್ಯಾರಂಟಿ ಯೋಜನೆಗಳಿಂದಾಗಿ ಇಂದು ರಾಜ್ಯದ ಜನರಿಗೆ ಹಲವು ರೀತಿಯ ಲಾಭಗಳು ದೊರೆಯುತ್ತಿವೆ. ಪಿಂಚಣಿಗೆ ಯಾರು ಅರ್ಹರು ಅವರೆಲ್ಲರೂ ಪಿಂಚಣಿಗೆ ಅರ್ಜಿ ಸಲ್ಲಿಸಿ ಯೋಜನೆಗಳ ಲಾಭ ಪಡೆಯಬೇಕು ಎಂದು ಶಾಸಕ ಆರ್.ವಿ ದೇಶಪಾಂಡೆ ಹೇಳಿದರು.

ಅವರು ಗುರುವಾರ ಜೊಯಿಡಾದಲ್ಲಿ ತಾಲ್ಲೂಕು ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಹಶೀಲ್ದಾರರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ನೆರವಾಗಬೇಕು ಎಂದರು.

ADVERTISEMENT

ಈ ಸಂದರ್ಭದಲ್ಲಿ ವಿಧವಾ, ಅಂಗವಿಕಲ , ವೃದ್ಧಾಪ್ಯ ವೇತನ ಸೇರಿದಂತೆ ಆರ್‌ಟಿಸಿ ಸಮಸ್ಯೆ ಇದ್ದ ಪ್ರಕರಣಗಳನ್ನು ಇತ್ಯರ್ಥ ಪಡಿಸಿ ಆದೇಶ ಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಮಂಜುನಾಥ ಮೊನ್ನೊಳ್ಳಿ, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಭಾರತಿ ಎನ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪುರುಷೋತ್ತಮ ಕಾಮತ, ಕಾಂಗ್ರೆಸ್ ಪಕ್ಷದ ಮುಖಂಡರಾದ ಸದಾನಂದ ದಬ್ಗಾರ್, ಮಂಜುನಾಥ ಮೊಕಾಶಿ, ದತ್ತಾ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.