ADVERTISEMENT

ಉತ್ತರ ಕನ್ನಡ: ಲಾಕ್‌ಡೌನ್ ಆದೇಶ ಉಲ್ಲಂಘಿಸಿದ ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 12 ಮೇ 2020, 14:38 IST
Last Updated 12 ಮೇ 2020, 14:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿರಸಿ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಇಲ್ಲಿನ ಕಸ್ತೂರಬಾ ನಗರದಲ್ಲಿ ಬಡವರಿಗೆ ಝಕಾತ್ ರೂಪದಲ್ಲಿ ದಾನ ಮಾಡುತ್ತಿದ್ದ ವ್ಯಕ್ತಿಯನ್ನು ಇಲ್ಲಿನ ಮಾರುಕಟ್ಟೆ ಪೊಲೀಸರು ಮಂಗಳವಾರ ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ಮುಸ್ಲಿಂಗಲ್ಲಿಯ ಅಬ್ದುಲ್ ರೆಹಮಾನ್ ಅಬ್ದುಲ್ ರಹೀಮ್ ಪಾಳಾ ಬಂಧಿತ ವ್ಯಕ್ತಿ.

ಕೊರೊನಾ ಸೋಂಕು ಹರಡದಂತೆ ತಡೆಯಲು ಜಿಲ್ಲಾಡಳಿತ ಮತ್ತು ವಕ್ಫ್ ಬೋರ್ಡ್ ಮುಂಜಾಗ್ರತಾ ಕ್ರಮವಾಗಿ ರಂಜಾನ್ ಸಂದರ್ಭದಲ್ಲಿ ಮಸೀದಿ ಮತ್ತು ಮನೆಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಝಕಾತ್, ಇಫ್ತಿಯಾರ್ ಕೂಟ ಏರ್ಪಡಿಸುವುದನ್ನು ನಿರ್ಬಂಧಿಸಿ ತಿಳಿವಳಿಕೆ ನೀಡಿದೆ. ಈ ಆದೇಶವನ್ನು ಉಲ್ಲಂಘಿಸಿ, ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ, ಹಣ ದಾನ ಮಾಡುತ್ತ, ಅನವಶ್ಯಕವಾಗಿ ತಿರುಗುತ್ತಿದ್ದ ಈ ವ್ಯಕ್ತಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಪ್ರಾರ್ಥನೆ, ಝಕಾತ್, ಇಫ್ತಿಯಾರ್ ಕೂಟ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ. ಅನವಶ್ಯಕವಾಗಿ ಜನರು ಸೇರಿದ್ದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಜಿ.ಟಿ.ನಾಯಕ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.