ADVERTISEMENT

ಕಾರವಾರ ವೈದ್ಯಕೀಯ ಕಾಲೇಜಿಗೆ ಸ್ನಾತಕೋತ್ತರ ಕೋರ್ಸ್‌ಗಳು ಮಂಜೂರು

ಐದು ವಿಭಾಗಗಳಲ್ಲಿ 14 ವಿದ್ಯಾರ್ಥಿಗಳಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 31 ಜನವರಿ 2022, 14:54 IST
Last Updated 31 ಜನವರಿ 2022, 14:54 IST
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ   

ಕಾರವಾರ: ನಗರದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಕ್ರಿಮ್ಸ್) 2021–22ನೇ ಸಾಲಿಗೆ ಸ್ನಾತಕೋತ್ತರ ಕೋರ್ಸ್‌ಗಳನ್ನು (ಎಂ.ಡಿ) ಆರಂಭಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗವು ಅನುಮತಿ ನೀಡಿದೆ. ಇದರೊಂದಿಗೆ ಸಂಸ್ಥೆಯು ವೈದ್ಯಕೀಯ ಶಿಕ್ಷಣದಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.

ಒಟ್ಟು 14 ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಮೋದನೆ ನೀಡಲಾಗಿದೆ. ಅಖಿಲ ಭಾರತ ಕೋಟಾದಲ್ಲಿ ಐದು ಮತ್ತು ರಾಜ್ಯ ಕೋಟಾದಲ್ಲಿ ಒಂಬತ್ತು ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

‌ಇವುಗಳಲ್ಲಿ ರೋಗ ವಿಜ್ಞಾನ (ಪ್ಯಾಥೊಲಜಿ) ಅಧ್ಯಯನಕ್ಕೆ ಇಬ್ಬರು, ಜನರಲ್ ಮೆಡಿಸಿನ್‌, ಮೂಳೆ ವಿಜ್ಞಾನ, ಅರಿವಳಿಕೆ ವಿಜ್ಞಾನ, ಪ್ರಸೂತಿ ಮತ್ತು ಸ್ತ್ರೀರೋಗ ಅಧ್ಯಯನಕ್ಕೆ ತಕಾ ಮೂರು ಸೀಟುಗಳನ್ನು ನೀಡಲಾಗಿದೆ. ಎಲ್ಲ ವಿಭಾಗಗಳಲ್ಲಿ ಅಖಿಲ ಭಾರತ ಕೋಟಾದಲ್ಲಿ ತಲಾ ಒಬ್ಬರ ಪ್ರವೇಶಾತಿಯ ಕಡ್ಡಾಯಗೊಳಿಸಿ ಸೀಟು ಹಂಚಿಕೆ ಮಾಡಲಾಗಿದೆ.

ADVERTISEMENT

ಈ ಬಗ್ಗೆ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ, ‘ಸ್ನಾತಕೋತ್ತರ ಪದವಿ ಬೋಧನೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗವು ಅನುಮತಿ ಮತ್ತು ಸೀಟುಗಳ ಹಂಚಿಕೆ ಮಾಡಿದ ಆದೇಶವು ಸೋಮವಾರ ಸಿಕ್ಕಿದೆ. ಮಂಗಳವಾರದಿಂದ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಲಿವೆ. ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಡಿ (ಎನ್.ಇ.ಇ.ಟಿ) ವಿದ್ಯಾರ್ಥಿಗಳ ಪ್ರವೇಶಾತಿ ಆಗಲಿದೆ’ ಎಂದು ತಿಳಿಸಿದರು.

‘ಸಂಸ್ಥೆಗೆ ಸ್ನಾತಕೋತ್ತರ ಪದವಿಯ ಕೋರ್ಸ್‌ಗಳನ್ನು ನೀಡುವಂತೆ ಈ ಹಿಂದೆಯೇರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಪತ್ರ ಬರೆಯಲಾಗಿತ್ತು. ಅದನ್ನು ಮಂಜೂರು ಮಾಡಿಸುವಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರ ಶ್ರಮವಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.