ADVERTISEMENT

ಸಂಸ್ಕರಣಾ ಘಟಕಕ್ಕೆ ಮುನ್ನೆಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 15:35 IST
Last Updated 11 ಏಪ್ರಿಲ್ 2020, 15:35 IST
ಶಿರಸಿ ತಾಲ್ಲೂಕಿನ ಬನವಾಸಿಯ ಅನಾನಸ್ ಸಂಸ್ಕರಣಾ ಘಟಕದಲ್ಲಿ ವ್ಯವಸ್ಥೆಯನ್ನು ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಪರಿಶೀಲಿಸಿದರು
ಶಿರಸಿ ತಾಲ್ಲೂಕಿನ ಬನವಾಸಿಯ ಅನಾನಸ್ ಸಂಸ್ಕರಣಾ ಘಟಕದಲ್ಲಿ ವ್ಯವಸ್ಥೆಯನ್ನು ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಪರಿಶೀಲಿಸಿದರು   

ಶಿರಸಿ: ಕೆಲದಿನ ಬಂದಾಗಿದ್ದ ತಾಲ್ಲೂಕಿನ ಬನವಾಸಿಯ ಅನಾನಸ್ ಸಂಸ್ಕರಣಾ ಘಟಕವು ಕಾರ್ಯಾರಂಭ ಮಾಡಿದೆ. ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಅವರು ಶನಿವಾರ ಘಟಕಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು.

ಅನಾನಸ್ ಬೆಳೆಗಾರರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಘಟಕವನ್ನು ತೆರೆಯಲಾಗಿದೆ. ಇಲ್ಲಿ 105 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕೋವಿಡ್–19 ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ ಎಂದು ಕುಲಕರ್ಣಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT