ಅಂಕೋಲಾ: ಸಿಹಿ ತಿಂಡಿಯ ಆಮಿಷ ಒಡ್ಡಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ತಾಲ್ಲೂಕಿನ ಗ್ರಾಮವೊಂದರ 72 ವರ್ಷ ವ್ಯಕ್ತಿಯನ್ನು ಅಂಕೋಲಾ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
‘ಮೇ 10 ರಂದು ಆರೋಪಿಯು ಆಮಿಷವೊಡ್ಡಿ ಬಾಲಕಿಯನ್ನು ತೋಟಕ್ಕೆ ಕರೆದೊಯ್ದು ಕಿರುಕುಳ ನೀಡಿದ್ದ ಎಂದು ಆಕೆಯ ಕುಟುಂಬದವರು ದೂರು ಸಲ್ಲಿಸಿದ್ದರು. ಅದರ ಆಧಾರದಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.