ADVERTISEMENT

ಸಂಚಾರ ನಿಯಮ ಉಲ್ಲಂಘನೆ: ವಾಹನಗಳಿಗೆ ‘ವೀಲ್ ಲಾಕ್’

​ಪ್ರಜಾವಾಣಿ ವಾರ್ತೆ
Published 1 ಜೂನ್ 2019, 12:55 IST
Last Updated 1 ಜೂನ್ 2019, 12:55 IST
ಗೋಕರ್ಣದ ರಥಬೀದಿಯಲ್ಲಿ ವಾಹನ ನಿಲುಗಡೆ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಪೊಲೀಸರು ಶನಿವಾರ ವೀಲ್ ಲಾಕ್ ಅಳವಡಿಸಿದರು
ಗೋಕರ್ಣದ ರಥಬೀದಿಯಲ್ಲಿ ವಾಹನ ನಿಲುಗಡೆ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಪೊಲೀಸರು ಶನಿವಾರ ವೀಲ್ ಲಾಕ್ ಅಳವಡಿಸಿದರು   

ಗೋಕರ್ಣ:ಇಲ್ಲಿ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಗಮ ಸಂಚಾರಕ್ಕೆ ಪೊಲೀಸರು ಕ್ರಮ ಕೈಗೊಂಡರೂ ಚಾಲಕರಿಂದ ಸೂಕ್ತಸ್ಪಂದನೆಸಿಗಲಿಲ್ಲ. ಹಾಗಾಗಿಎಲ್ಲೆಂದರಲ್ಲಿ ನಿಲುಗಡೆ ಮಾಡಲಾಗಿದ್ದ ವಾಹನಗಳಿಗೆ ಪೊಲೀಸರು ವೀಲ್ ಲಾಕ್ ಅಳವಡಿಸಿದರು. ಚಾಲಕರಿಗೆ ದಂಡ ವಿಧಿಸಿದರು.

ಪಿ.ಎಸ್.ಐ ಸಂತೋಷಕುಮಾರ್.ಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಿಲುಗಡೆ ನಿಷೇಧ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಚಾಲಕರ ವಿರುದ್ಧ ಕ್ರಮ ಕೈಗೊಂಡರು.ರಥಬೀದಿ ಹಾಗೂಏಕಮುಖರಸ್ತೆಯಲ್ಲಿ ವಾಹನ ನಿಲ್ಲಿಸುವುದನ್ನು ಈಗಾಗಲೇ ನಿಷೇಧಿಸಲಾಗಿದೆ.ಕೆಲವು ಕಡೆ ಫಲಕಗಳನ್ನೂ ಅಳವಡಿಸಲಾಗಿದೆ.‌ಈ ಬಗ್ಗೆ ಜನರಿಗೆ ಸಾಕಷ್ಟು ತಿಳಿವಳಿಕೆಯನ್ನೂ ನೀಡಲಾಗಿದೆ. ಆದರೂ ವಾಹನ ಸವಾರರು ನಿಯಮ ಮೀರುತ್ತಿರುವುದರಿಂದ ಹಲವು ಬಾರಿಸಮಸ್ಯೆಯಾಗಿತ್ತು.

ಮುಂದಿನ ದಿನಗಳಲ್ಲಿ ಹಲವು ಕಡೆ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗುತ್ತದೆ.ಸಂಚಾರ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುವುದು. ಮುಖ್ಯರಸ್ತೆ ಮತ್ತು ರಥಬೀದಿಯಲ್ಲಿ ಕೆಲವರು ಅತಿ ವೇಗದಿಂದ, ನಿಯಮ ಮೀರಿ ದ್ವಿಚಕ್ರ ವಾಹನಗಳು ಹಾಗೂ ಆಟೊರಿಕ್ಷಾಗಳನ್ನುಚಲಾಯಿಸುತ್ತಿದ್ದಾರೆ. ಇದರಿಂದ ನಾಗರಿಕರಿಗೆ ಹಾಗೂ ಪ್ರವಾಸಿಗರಿಗೆ ತೊಂದರೆಯಾಗುತ್ತಿದೆ ಎಂದು ಅನೇಕ ದೂರುಗಳು ಬಂದಿದೆ. ಅಂಥವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಂತೋಷಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.