ಶಿರಸಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಇಲ್ಲಿನ ಹೊಸ ಮಾರಕಟ್ಟೆ ಪೊಲೀಸ್ ಠಾಣೆಯ ಆವರಣದಲ್ಲಿ ಡಿವೈಎಸ್ಪಿ ಜಿ.ಟಿ.ನಾಯಕ ಸಸಿ ನೆಟ್ಟರು.
‘ಪರಿಸರ ಜೀವನದ ಗತಿಬಿಂಬ. ಮಾನವ ಕುಲದ ಉಳಿವಿಗಾಗಿ ಪರಿಸರದ ರಕ್ಷಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಪರಿಸರ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ’ ಎಂದು ಜಿ.ಟಿ.ನಾಯಕ ಮಾರುಕಟ್ಟೆ ಠಾಣೆಯ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾಜದಲ್ಲಿ ಪರಿಸರ ಜಾಗೃತಿಯ ಪ್ರಜ್ಞೆ ಮೂಡಿಸುವ ದಿಸೆಯಲ್ಲಿ ಠಾಣೆಯ ಅಧಿಕಾರಿ, ಸಿಬ್ಬಂದಿ ಹಸಿರು ಪಟ್ಟಿ ಕಟ್ಟಿಕೊಂಡು ಕಾರ್ಯ ನಿರ್ವಹಿಸಿದರು. ಮಾರುಕಟ್ಟೆ ಠಾಣೆಯ ಆವರಣದಲ್ಲಿ 60ಕ್ಕೂ ಹೆಚ್ಚು ಬಗೆಯ ಸಸಿಗಳನ್ನು ನಾಟಿ ಮಾಡಲಾಗಿದೆ. ಠಾಣೆಯ ಆವರಣವು ಹಸಿರಿನಿಂದ ಕಂಗೊಳಿಸುತ್ತಿದೆ. ಸಿಪಿಐ ಪ್ರದೀಪ ಬಿ.ಯು, ಪಿಎಸ್‌ಐಗಳಾದ ನಾಗಪ್ಪ ಬಿ, ಶಿವಾನಂದ ನಾವದಗಿ, ನಂಜಾ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.