ADVERTISEMENT

ಔಷಧಿ ವಿಚಾರದಲ್ಲಿ ರಾಜಕೀಯ ಬೇಡ: ಕೆ.ಜಿ. ನಾಯ್ಕ ಹಣಜೀಬೈಲ್

​ಪ್ರಜಾವಾಣಿ ವಾರ್ತೆ
Published 31 ಮೇ 2025, 13:43 IST
Last Updated 31 ಮೇ 2025, 13:43 IST
ಸಿದ್ದಾಪುರದಲ್ಲಿ ಬಿಜೆಪಿ ಮಂಡಲದ ವತಿಯಿಂದ ಸರ್ಕಾರಿ ಆಸ್ಪತ್ರೆಯೆದುರು ಪ್ರತಿಭಟನೆ ನಡೆಸಲಾಯಿತು
ಸಿದ್ದಾಪುರದಲ್ಲಿ ಬಿಜೆಪಿ ಮಂಡಲದ ವತಿಯಿಂದ ಸರ್ಕಾರಿ ಆಸ್ಪತ್ರೆಯೆದುರು ಪ್ರತಿಭಟನೆ ನಡೆಸಲಾಯಿತು   

ಸಿದ್ದಾಪುರ: ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿದ್ದು ಖಂಡನೀಯ. ಚುನಾವಣೆಯಲ್ಲಿ ರಾಜಕೀಯ ಮಾಡಬೇಕೇ ಹೊರತು, ಜನಸಾಮಾನ್ಯರಿಗೆ ತಲುಪುವ ಔಷಧೀಯ ವಿಚಾರದಲ್ಲಿ ಅಲ್ಲ’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ ಹಣಜೀಬೈಲ್ ಹೇಳಿದರು.

ಸರ್ಕಾರಿ ಆಸ್ಪತ್ರೆಗಳಿಂದ ಜನೌಷಧಿ ಮಳಿಗೆ ತೆರವುಗೊಳಿಸುವ ರಾಜ್ಯ ಸರ್ಕಾರದ ಆದೇಶ ವಿರೋಧಿಸಿ ತಾಲ್ಲೂಕು ಬಿಜೆಪಿ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆ ಎದುರು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ರಾಜ್ಯ ಶಿಕ್ಷಣ ಪ್ರಕೋಷ್ಠದ ಪ್ರಮುಖ ರವಿ ಹೆಗಡೆ ಹೂವಿನ ಮನೆ, ಬಿಜೆಪಿ ಸಿದ್ದಾಪುರ ತಾಲ್ಲೂಕು ಘಟಕದ ಅಧ್ಯಕ್ಷ ತಿಮ್ಮಪ್ಪ ಮಡಿವಾಳ ಮಾತನಾಡಿ ಮಾತನಾಡಿದರು.

ADVERTISEMENT

ಬಿಜೆಪಿ ಪ್ರಮುಖರಾದ ಗುರುರಾಜ ಶಾನಭಾಗ, ಎಸ್.ಕೆ. ಮೇಸ್ತ, ಸುರೇಶ ನಾಯ್ಕ ಬಾಲಿಕೊಪ್ಪ, ನಂದನ ಬೋರ್ಕರ, ವಿಜಯೇಂದ್ರ ಗೌಡರ್, ರವಿಕುಮಾರ ನಾಯ್ಕ, ತೋಟಪ್ಪ ನಾಯ್ಕ,ಮಂಜುನಾಥ ಭಟ್ಟ, ವಿನಾಯಕ ಹೆಗಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.