ADVERTISEMENT

ವರದಿ ಫಲಶ್ರುತಿ| ಗೋಕರ್ಣ ಸುತ್ತಮುತ್ತಲ ಗ್ರಾಮಗಳಲ್ಲಿ ಅನಾರೋಗ್ಯ ಪೀಡಿತರ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 13:25 IST
Last Updated 5 ಜುಲೈ 2020, 13:25 IST
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಯೊಬ್ಬರ ಗಂಟಲು ದ್ರವದ ಮಾದರಿಯನ್ನು ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಸಂಗ್ರಹಿಸಲಾಯಿತು
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಯೊಬ್ಬರ ಗಂಟಲು ದ್ರವದ ಮಾದರಿಯನ್ನು ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಸಂಗ್ರಹಿಸಲಾಯಿತು   

ಗೋಕರ್ಣ: ಜ್ವರ, ನೆಗಡಿ, ಕೆಮ್ಮು ಮುಂತಾದ ಆರೋಗ್ಯ ಸಮಸ್ಯೆ ಇರುವ ಸುತ್ತಮುತ್ತಲಿನ ಗ್ರಾಮಸ್ಥರು,ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಗಂಟಲು ದ್ರವ ಪರೀಕ್ಷೆಗೆ ಒಳಪಟ್ಟರು.ಸೋಮವಾರವೂ ತಪಾಸಣೆ ಮುಂದುವರಿಯಲಿದೆ.

30ಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಿತರಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದು ಸಹಕರಿಸಿದರು. ಆರೋಗ್ಯಾಧಿಕಾರಿ ಡಾ.ಜಗದೀಶ ನಾಯ್ಕ ಅವರ ನೇತೃತ್ವದಲ್ಲಿ ಎಲ್ಲರ ತಪಾಸಣೆ ನಡೆಸಲಾಯಿತು. ಗೋಕರ್ಣದಲ್ಲಿಯೇ ಆರೋಗ್ಯ ಇಲಾಖೆ ಈ ವ್ಯವಸ್ಥೆ ಕಲ್ಪಿಸಿದ್ದು ಜನರಿಗೆ ತುಂಬ ಅನುಕೂಲವಾಯಿತು. ಇಲ್ಲವಾದರೆ ಕುಮಟಾಕ್ಕೆ ಹೋಗಿ ಬರಬೇಕಾಗಿತ್ತು.

‘ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಖಾಸಗಿ ವೈದ್ಯರು ಹಾಗೂ ಔಷಧ ಮಾರಾಟ ಮಳಿಗೆಗಳಿಂದಕೆಮ್ಮು, ಜ್ವರ, ನೆಗಡಿಗೆ ಮಾತ್ರೆಗಳನ್ನು ತೆಗೆದುಕೊಂಡು ಹೋದವರ ಹೆಸರನ್ನು ಸಂಗ್ರಹಿಸಲು ತಿಳಿಸಲಾಗಿತ್ತು. ತಾಲ್ಲೂಕು ಆರೋಗ್ಯ ಅಧಿಕಾರಿಗಳುನೀಡಿದ ಮಾಹಿತಿಯನ್ನು ಆಧರಿಸಿ ಜನರಿಗೆ ಆರೋಗ್ಯ ಕೇಂದ್ರಕ್ಕೆ ಬರಲು ಮೊದಲೇ ಮನವರಿಕೆ ಮಾಡಲಾಗಿತ್ತು. ಇದರಿಂದ ಜನರು ಉತ್ತಮ ರೀತಿಯಲ್ಲಿ ಸಹಕಾರ ನೀಡಿದ್ದಾರೆ’ ಎಂದು ಡಾ.ಜಗದೀಶ ನಾಯ್ಕ ತಿಳಿಸಿದರು.

ADVERTISEMENT

ಗೋಕರ್ಣದಲ್ಲಿ ಫೀವರ್ ಕ್ಲಿನಿಕ್ ತೆರೆಯಬೇಕು ಎಂದು ನಾಗರಿಕರು ಆಗ್ರಹಿಸಿದ್ದರು. ‘ಪ್ರಜಾವಾಣಿ’ಯಲ್ಲಿ ಜುಲೈ 3ರಂದು ಈ ಬಗ್ಗೆ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.