ADVERTISEMENT

ಪ್ರತಿಭಾಕಾರಂಜಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುತ್ತದೆ; ಲತಾ ನಾಯಕ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 9:07 IST
Last Updated 31 ಡಿಸೆಂಬರ್ 2025, 9:07 IST
ಅಂಕೋಲಾ ಪಟ್ಟಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಅಂಕೋಲಾ ಪಟ್ಟಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.   

ಅಂಕೋಲಾ: ಮಕ್ಕಳ ಪ್ರತಿಭೆಯನ್ನು ಬೆಳಕಿಗೆ ತರಲು ಪ್ರತಿಭಾ ಕಾರಂಜಿ ಅತ್ಯುತ್ತಮ ಮಾಧ್ಯಮವಾಗಿದೆ. ಸಾಹಿತ್ಯ, ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳಲು ಈ ಸ್ಪರ್ಧೆಯು ಮಕ್ಕಳಲ್ಲಿ ಹೊಸ ಚೇತನ ಹಾಗೂ ಆತ್ಮವಿಶ್ವಾಸ ಮೂಡಿಸಲು ಕಾರಣವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಲತಾ ನಾಯಕ ಹೇಳಿದರು.

ಪಟ್ಟಣದ ಸ್ವಾತಂತ್ರ್ಯ ಸಂಗ್ರಾಮ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅನೇಕ ನಿರ್ಣಾಯಕ ಹಂತದ ಸ್ಪರ್ಧೆಯನ್ನು ಎದುರಿಸಿ ಉನ್ನತ ಸ್ಥಾನ ಪಡೆಯುತ್ತಾರೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕ ಎನ್.ಆರ್.ಹೆಗಡೆ , ಮಕ್ಕಳನ್ನು ಕೇವಲ ಅಂಕಗಳಿಕೆಗೆ ಮಾತ್ರ ಸೀಮಿತಗೊಳಿಸದೇ ಅವರನ್ನು ಕಲೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಕ್ಕೂ ಪರಿಚಯಿಸಬೇಕು. ಬದುಕಿನಲ್ಲಿ ಅರ್ಥ ಸಾಧನೆ ಅಷ್ಟೇ ಮುಖ್ಯವಲ್ಲ, ಜೀವನ ಶಿಕ್ಷಣವು ಅತ್ಯಂತ ಮುಖ್ಯವಾಗಿರುತ್ತದೆ ಎಂದರು.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದು ಗಾಂವಕರ, ಡಿವೈಸಿ ಭಾಸ್ಕರ ಗಾಂವಕರ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಗದೀಶ ನಾಯಕ , ತಾಲ್ಲೂಕು ಪದವಿಪೂರ್ವ ನೌಕರರ ಸಂಘದ ಅಧ್ಯಕ್ಷ ಮಹೇಶ ನಾಯಕ, ಬಿ.ಆರ್.ಸಿ ದೇವರಾಯ ನಾಯಕ, ಅಕ್ಷರದಾಸೋಹ ಸಂಯೋಜಕಿ ಪದ್ಮಾ ನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.