ಅಂಕೋಲಾ: ‘ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ತಾಲ್ಲೂಕಿನಲ್ಲಿ ಎಲ್ಲ ಪೂರ್ವಸಿದ್ಧತೆ ಕೈಗೊಳ್ಳಲಾಗಿದ್ದು, ಈ ಬಾರಿ 1,342 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮಿ ಪಾಟೀಲ ತಿಳಿಸಿದರು.
ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಲ್ಕು ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿನ ಜೈ ಹಿಂದ್ ಪ್ರೌಢಶಾಲೆ, ವಾಸುದೇವ ಕಸಬೇಕರ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ ಹಾಗೂ ಪಿ.ಎಂ.ಪ್ರೌಢಶಾಲೆಗಳಲ್ಲಿ ಕೇಂದ್ರ ತೆರೆಯಲಾಗುತ್ತಿದೆ. ಮಾರ್ಚ್ 25ರಿಂದ ಪರೀಕ್ಷೆಗಳು ಪ್ರಾರಂಭವಾಗಲಿದ್ದು ಏ.26ಕ್ಕೆ ಮುಕ್ತಾಯಗೊಳ್ಳಲಿದೆ’ ಎಂದರು.
‘ಪರೀಕ್ಷೆ ಬರೆಯಲಿರುವವರ ಪೈಕಿ 1,290 ರೆಗ್ಯುಲರ್ ವಿದ್ಯಾರ್ಥಿಗಳು, 18 ಖಾಸಗಿ ವಿದ್ಯಾರ್ಥಿಗಳು ಹಾಗೂ 25 ಮರು ಪರೀಕ್ಷಾರ್ಥಿಗಳು ಸೇರಿ ಒಟ್ಟೂ 703 ಗಂಡು ಮಕ್ಕಳು ಹಾಗೂ 639 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಮೊಬೈಲ್ ಆ್ಯಪ್ ಮೂಲಕ ಎಲ್ಲಾ ಕೇಂದ್ರಗಳ ಪರೀಕ್ಷಾ ಕೇಂದ್ರಗಳ ಸಿಸಿಟಿವಿ ದೃಶ್ಯಗಳ ವೀಕ್ಷಣೆ ನಡೆಸಲಾಗುವುದು. ಅಕ್ರಮ ನಡೆಯದಂತೆ ಸೂಕ್ತ ನಿಗಾ ವಹಿಸಲಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.