ಅಂಕೋಲಾ: ತಾಲ್ಲೂಕಿನ ಶಿರಗುಂಜಿ ಗ್ರಾಮದ ಅಂಜುಮಾಲಾ ನಾಯಕ ಅವರಿಗೆ ರಾಷ್ಟಪತಿ ಪೊಲೀಸ್ ಪದಕ ದೊರೆತಿದ್ದು ಆಗಸ್ಟ್ 30ರಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್ ಅವರು ರಾಜಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ಹಾಗೂ ಪದಕ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉಪಸ್ಥಿತರಿದ್ದರು.
ಅಂಜುಮಾಲಾ ನಾಯಕ ಅವರು 24 ವರ್ಷಗಳ ಹಿಂದೆ ಸೇವೆಗೆ ಸೇರಿದ ಅವರು ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಪದೋನ್ನತಿ ಹೊಂದಿ ಪ್ರಸ್ತುತ ಬೆಂಗಳೂರು ಸಿಐಡಿ ವಿಭಾಗದಲ್ಲಿ ಎಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.