ADVERTISEMENT

ಸಿದ್ದಾಪುರ: ರಾಘವೇಂದ್ರ ಹೆಗಡೆಗೆ ರಾಷ್ಟ್ರಪತಿ ಪೊಲೀಸ್ ಪದಕ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2025, 4:54 IST
Last Updated 1 ಸೆಪ್ಟೆಂಬರ್ 2025, 4:54 IST
ರಾಘವೇಂದ್ರ ಹೆಗಡೆ ರಾಷ್ಟ್ರಪತಿ ಪದಕವನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರಿಂದ ಸ್ವೀಕರಿಸಿದರು
ರಾಘವೇಂದ್ರ ಹೆಗಡೆ ರಾಷ್ಟ್ರಪತಿ ಪದಕವನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರಿಂದ ಸ್ವೀಕರಿಸಿದರು   

ಸಿದ್ದಾಪುರ: ತಾಲ್ಲೂಕಿನ ಹುಲಿಮನೆಯ ರಾಘವೇಂದ್ರ ಕೃಷ್ಣಮೂರ್ತಿ ಹೆಗಡೆ ಅವರಿಗೆ ರಾಷ್ಟ್ರಪತಿ ಪೊಲೀಸ್ ಪದಕ ದೊರೆತಿದ್ದು ಆಗಸ್ಟ್‌ 30 ರಂದು ಕರ್ನಾಟಕದ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ರಾಜಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ಹಾಗೂ ಪದಕವನ್ನು ಪ್ರದಾನ ಮಾಡಿ ಗೌರವಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಮಂತ್ರಿ ಪರಮೇಶ್ವರ ಉಪಸ್ಥಿತರಿದ್ದರು. ರಾಘವೇಂದ್ರ ಹೆಗಡೆಯವರು ಪ್ರಸ್ತುತ ಬೆಂಗಳೂರಿನ ಸಿಐಡಿ ಪ್ರಧಾನ ಕಚೇರಿಯಲ್ಲಿ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯದಲ್ಲಿದ್ದಾರೆ. ಕಳೆದ 24 ವರ್ಷಗಳ ಹಿಂದೆ ಸೇವೆಗೆ ಸೇರಿದ ಇವರು ವಿವಿಧ ಹುದ್ದೆಗಳನ್ನು ಅಲಂಕರಿಸಿ ಪದೋನ್ನತಿ ಹೊಂದಿ ಕಳೆದ ಕೆಲವು ವರ್ಷಗಳಿಂದ ಎಸ್‍ಪಿಯಾಗಿ ಕರ್ತವ್ಯದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT