
ಪ್ರಜಾವಾಣಿ ವಾರ್ತೆ
ಕಾರವಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾ (ಡಿ.28) ಇಲ್ಲಿನ ಕದಂಬ ನೌಕಾನೆಲೆಗೆ ಭೇಟಿ ನೀಡಲಿದ್ದು, ಜಲಾಂತರ್ಗಾಮಿ ಯುದ್ಧನೌಕೆಯೊಳಗೆ ಸಮುದ್ರದಲ್ಲಿ ಸಂಚರಿಸುವರು.
‘ರಾಷ್ಟ್ರಪತಿ ಭೇಟಿ ಮತ್ತು ಸಮುದ್ರದೊಳಗೆ ಅವರು ಸಂಚರಿಸುವ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆಯಿಂದ ಮಧ್ಯಾಹ್ನ 3.30ರವರೆಗೆ ಕಾರವಾರ ತಾಲ್ಲೂಕಿನ ಮಾಜಾಳಿಯಿಂದ ಹಾರವಾಡವರೆಗೆ 18 ಕಿ.ಮೀ ವ್ಯಾಪ್ತಿಯಲ್ಲಿ ಮೀನುಗಾರಿಕೆ ಚಟುವಟಿಕೆಗೆ ನಿಷೇಧವಿರುತ್ತದೆ’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.