ADVERTISEMENT

ಈ ಬಾರಿಯ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು: ಡಾ.ಕೆ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 31 ಜನವರಿ 2021, 8:38 IST
Last Updated 31 ಜನವರಿ 2021, 8:38 IST
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್    

ಶಿರಸಿ: ಈ ಬಾರಿಯ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ವಿಶ್ವಾಸವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ಭಾನುವಾರ ನಗರದ ಎಂಇಎಸ್ ಕಾಲೇಜು ಮೈದಾನದ ಹೆಲಿಪ್ಯಾಡ್‌ಗೆ ಬಂದಿಳಿದ ವೇಳೆ ಮಾಧ್ಯಮದವರ ಜತೆ ಮಾತನಾಡಿದ ಅವರು, 'ದೇಶದಲ್ಲೇ ಕರ್ನಾಟಕ ಆರೋಗ್ಯ ಕ್ಷೇತ್ರದಲ್ಲಿ ಮಾದರಿ ರಾಜ್ಯವಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಜೆಟ್‌ನಲ್ಲಿ ಹೆಚ್ಚು ಅನುದಾನ ಘೋಷಿಸಲಿದ್ದಾರೆ' ಎಂದರು.

'ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೂರು ದಿನ ಕೊರೊನಾ ವ್ಯಾಕ್ಸಿನ್ ವಿತರಣೆ ನಡೆಯುತ್ತಿಲ್ಲ. ಬಳಿಕ ಅದು ಮುಂದುವರೆಯಲಿದೆ' ಎಂದರು.

ADVERTISEMENT

'ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಈಗಾಗಲೆ ಅನುದಾನ ಬಿಡುಗಡೆ ಮಾಡಲಾಗಿದೆ. ಹದಿನೈದು ದಿನದಲ್ಲಿ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಳ್ಳಲಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.