ADVERTISEMENT

ವೈದ್ಯರ ಮುಷ್ಕರಕ್ಕೆ ನಗರದಲ್ಲೂ ಬೆಂಬಲ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 12:09 IST
Last Updated 17 ಜೂನ್ 2019, 12:09 IST
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಕಾರವಾರದ ಡಾ.ಪಿಕಳೆ ನರ್ಸಿಂಗ್ ಹೋಂಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಕಾರವಾರದ ಡಾ.ಪಿಕಳೆ ನರ್ಸಿಂಗ್ ಹೋಂಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು   

ಕಾರವಾರ:ಕೋಲ್ಕತ್ತದಲ್ಲಿ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ದೇಶದಾದ್ಯಂತ ಸೋಮವಾರ ಹಮ್ಮಿಕೊಳ್ಳಲಾದ ಮುಷ್ಕರವನ್ನು ನಗರದ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲಿಸಿದರು. ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ವಿಭಾಗವನ್ನು ಮುಚ್ಚಲಾಗಿತ್ತು.

ನಗರದಲ್ಲಿ ಬೆರಳೆಣಿಕೆಯ ಖಾಸಗಿ ಆಸ್ಪತ್ರೆಗಳಿವೆ.ತುರ್ತು ಚಿಕಿತ್ಸೆಯ ಅಗತ್ಯವಿಲ್ಲದರೋಗಿಗಳನ್ನು ಪುನಃ ಕಳುಹಿಸಲಾಯಿತು. ಮುಷ್ಕರದ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಡಾ.ಪಿಕಳೆನರ್ಸಿಂಗ್ ಹೋಂನ ಡಾ.ನಿತಿನ್ ಪಿಕಳೆ, ‘ಭಾರತೀಯ ವೈದ್ಯಕೀಯ ಸಂಘದ ಕರೆಯನ್ನು ಬೆಂಬಲಿಸಿ ಮುಷ್ಕರದಲ್ಲಿ ಭಾಗಿಯಾಗಿದ್ದೇವೆ. ವೈದ್ಯರಿಗೆ ರಕ್ಷಣೆ ಇಲ್ಲದಿದ್ದರೆ ರೋಗಿಗಳಿಗೆ ಸಮರ್ಪಕವಾಗಿ ಸೇವೆ ಕೊಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಒಗ್ಗಟ್ಟು ಪ್ರದರ್ಶಿಸಲು ಈ ಕ್ರಮ ಅನಿವಾರ್ಯವಾಗಿತ್ತು’ ಎಂದು ಹೇಳಿದರು.

ಇತ್ತ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಎಂದಿಗಿಂತ ತುಸು ಜಾಸ್ತಿಯಿತ್ತು. ವೈದ್ಯರ ಭೇಟಿಗೆ ಚೀಟಿ ಬರೆಯಿಸಿಕೊಳ್ಳಲು ಉದ್ದದ ಸಾಲಿನಲ್ಲಿ ನೂರಾರು ರೋಗಿಗಳು ತಾಸುಗಟ್ಟಲೆ ನಿಂತಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.