ADVERTISEMENT

ಮುಂಡಗೋಡ | ‘ಗ್ಯಾರಂಟಿಯಿಂದ ಆರ್ಥಿಕ ಸದೃಢತೆ’

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 4:51 IST
Last Updated 15 ಜುಲೈ 2025, 4:51 IST
ಶಕ್ತಿ ಯೋಜನೆ ಸಂಭ್ರಮದ ಹಿನ್ನೆಲೆಯಲ್ಲಿ ಮುಂಡಗೋಡ ಬಸ್‌ ನಿಲ್ದಾಣದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್‌ಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚಲಾಯಿತು
ಶಕ್ತಿ ಯೋಜನೆ ಸಂಭ್ರಮದ ಹಿನ್ನೆಲೆಯಲ್ಲಿ ಮುಂಡಗೋಡ ಬಸ್‌ ನಿಲ್ದಾಣದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್‌ಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚಲಾಯಿತು   

ಮುಂಡಗೋಡ: ಬಡವರ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಿಂದ ಲಕ್ಷಾಂತರ ಬಡಕುಟುಂಬಗಳು ಪ್ರಯೋಜನ ಪಡೆದುಕೊಂಡು, ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿವೆ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌.ಪಾಟೀಲ ಹೇಳಿದರು.

ಇಲ್ಲಿನ ಬಸ್‌ ನಿಲ್ದಾಣದಲ್ಲಿ ಸೋಮವಾರ ನಡೆದ ಶಕ್ತಿ ಯೋಜನೆ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಲಂಕೃತಗೊಂಡಿದ್ದ ರಾಜ್ಯ ರಸ್ತೆ ಸಾರಿಗೆ ಬಸ್‌ಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚಲಾಯಿತು.

ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ ಹಿರೇಮಠ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಮಾತನಾಡಿದರು. ತಹಶೀಲ್ದಾರ್ ಶಂಕರ ಗೌಡಿ, ತಾಲ್ಲೂಕು ಪಂಚಾಯಿತಿ ಇಒ ಟಿ.ವೈ.ದಾಸನಕೊಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಸುಧಾ ಭೋವಿ, ಜ್ಞಾನದೇವ ಗುಡಿಯಾಳ, ಧರ್ಮರಾಜ ನಡಗೇರಿ, ಶಾರದಾ ರಾಠೋಡ, ಚಂದ್ರಶೇಖರ ಕರಿಗಾರ, ರಫೀಕ ಇನಾಮದಾರ, ಹನಮಂತ ಭಜಂತ್ರಿ, ಎಂ.ಎನ್‌.ದುಂಡಶಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.