ADVERTISEMENT

ಮಲ್ಟಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಭರವಸೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 16:37 IST
Last Updated 18 ಏಪ್ರಿಲ್ 2024, 16:37 IST
ಹೊನ್ನಾವರ ತಾಲ್ಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆದ ಮಲೆನಾಡು ಉತ್ಸವ ಕಾರ್ಯಕ್ರಮವನ್ನು ಕ್ಷೇತ್ರದ ಧರ್ಮಾಧಿಕಾರಿ ಮಾರುತಿ ಗುರೂಜಿ ಉದ್ಘಾಟಿಸಿದರು
ಹೊನ್ನಾವರ ತಾಲ್ಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆದ ಮಲೆನಾಡು ಉತ್ಸವ ಕಾರ್ಯಕ್ರಮವನ್ನು ಕ್ಷೇತ್ರದ ಧರ್ಮಾಧಿಕಾರಿ ಮಾರುತಿ ಗುರೂಜಿ ಉದ್ಘಾಟಿಸಿದರು   

ಹೊನ್ನಾವರ: ’ಶ್ರೀಕ್ಷೇತ್ರ ಬಂಗಾರಮಕ್ಕಿ ಹಾಗೂ ಸುಧೀಕ್ಷ ಗ್ರುಪ್ ಆಫ್ ಕಂಪನಿ ಬೆಂಗಳೂರು ಇವುಗಳ ಸಹಯೋಗದಲ್ಲಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು’ ಎಂದು ಸುಧೀಕ್ಷ ಗ್ರುಪ್ ಆಫ್ ಕಂಪನಿಯ ಸಿಎಂಡಿ ಡಾ.ಸುಬ್ರಹ್ಮಣ್ಯ ಶರ್ಮ ಗೌರವರಂ ಭರವಸೆ ನೀಡಿದರು.

ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆದ ಸಂಸ್ಕೃತಿ ಕುಂಭ ಮಲೆನಾಡ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದಿರುವುದರಿಂದ ಜನರಿಗಾಗುತ್ತಿರುವ ಸಂಕಷ್ಟದ ಕುರಿತು ಕ್ಷೇತ್ರದ ಧರ್ಮಾಧಿಕಾರಿ ತಿಳಿಸಿದ್ದು, ಜನರ ಬೇಡಿಕೆಗೆ ಸ್ಪಂದಿಸುತ್ತೇನೆ. ಆಸ್ಪತ್ರೆಯ ಜೊತೆಗೆ ಎಂಜಿನಿಯರಿಂಗ್ ಕಾಲೇಜು ಆರಂಭಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಅರವಿಂದ ಕರ್ಕಿಕೋಡಿ, ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ವಿಚಾರ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಸರಕಾಗಿ ಬಳಕೆಯಾಗುತ್ತಿದೆ. ಆಸ್ಪತ್ರೆ ಸ್ಥಾಪನೆ ಭರವಸೆ ನೀಡಿದ ಸುಬ್ರಹ್ಮಣ್ಯ ಶರ್ಮ ಅವರನ್ನು ಅಭಿವಂದಿಸುತ್ತೇನೆ ಎಂದು ಹೇಳಿದರು.

ADVERTISEMENT

ಧರ್ಮಾಧಿಕಾರಿ ಮಾರುತಿ ಗುರೂಜಿ, ಬೆಂಗಳೂರಿನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಚೇತನ್ ಆರ್. ಮಾತನಾಡಿದರು. ಅರ್ಪಿತಾ, ಮಾರುತಿ ಗುರೂಜಿ ಇದ್ದರು. ಗಣಪತಿ ಹೆಗಡೆ ಸ್ವಾಗತಿಸಿದರು. ಆಡಳಿತಾಧಿಕಾರಿ ಎಂ.ಎನ್.ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲಕೃಷ್ಣ ನಾಯ್ಕ, ಕವಿತಾ ದೇವಾಡಿಗ ನಿರೂಪಿಸಿದರು. ಶಿಕ್ಷಕ ದಯಾನಂದ ನಾಯ್ಕ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.