ADVERTISEMENT

ಅನಾನಸ್ ಸಾಲ ಮೊತ್ತ ಹೆಚ್ಚಳಕ್ಕೆ ಪ್ರಸ್ತಾವ

ಡಿ.ಸಿ ಅಧ್ಯಕ್ಷತೆಯಲ್ಲಿ ಜಿಲ್ಲಾ ತಾಂತ್ರಿಕ ಸಲಹಾ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2022, 5:34 IST
Last Updated 4 ಜನವರಿ 2022, 5:34 IST
ಕೆಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾ ತಾಂತ್ರಿಕ ಸಲಹಾ ಸಮಿತಿ (ಡಿಟಿಸಿ) ಸಭೆ ನಡೆಯಿತು. ಸಚಿವ ಶಿವರಾಮ ಹೆಬ್ಬಾರ, ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ, ಉಪಾಧ್ಯಕ್ಷ ಮೋಹನದಾಸ ನಾಯಕ ಇದ್ದರು.
ಕೆಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾ ತಾಂತ್ರಿಕ ಸಲಹಾ ಸಮಿತಿ (ಡಿಟಿಸಿ) ಸಭೆ ನಡೆಯಿತು. ಸಚಿವ ಶಿವರಾಮ ಹೆಬ್ಬಾರ, ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ, ಉಪಾಧ್ಯಕ್ಷ ಮೋಹನದಾಸ ನಾಯಕ ಇದ್ದರು.   

ಶಿರಸಿ: ಅನಾನಸ್, ಭತ್ತ, ಹತ್ತಿ, ಮೆಕ್ಕೆಜೋಳಕ್ಕೆ ಈಗ ನೀಡುತ್ತಿರುವ ಬೆಳೆಸಾಲ ಪ್ರಮಾಣವನ್ನು ಸ್ವಲ್ಪ ಏರಿಕೆ ಮಾಡುವ ಕುರಿತು ರಾಜ್ಯಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗೆ ಪ್ರಸ್ತಾವನೆ ಸಲ್ಲಿಸಲು ಸೋಮವಾರ ನಡೆದ ಜಿಲ್ಲಾ ತಾಂತ್ರಿಕ ಸಲಹಾ ಸಮಿತಿ (ಡಿಟಿಸಿ) ಸಭೆಯಲ್ಲಿ ನಿರ್ಣಯಿಸಲಾಯಿತು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಇಲ್ಲಿನ ಕೆಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ರೈತರಿಗೆ ಅನುಕೂಲ ಕಲ್ಪಿಸುವ ಬಗ್ಗೆ ಹಣಕಾಸು ಯೋಜನೆ ಸಿದ್ಧಪಡಿಸುವ ಕುರಿತು ಚರ್ಚಿಸಿದರು.

ಪ್ರತಿ ಎಕರೆ ಅನಾನಸ್ ಬೆಳೆಯುವ ಪ್ರದೇಶಕ್ಕೆ ರೈತರಿಗೆ ತಲಾ ₹45 ಸಾವಿರ ಬೆಳೆಸಾಲ ನೀಡಲಾಗುತ್ತಿದ್ದು, ಅದನ್ನು ₹50 ಸಾವಿರಕ್ಕೆ ಏರಿಕೆ ಮಾಡಬೇಕು. ಹತ್ತಿಗೆ ₹20ರ ಬದಲಾಗಿ ₹25 ಸಾವಿರ ನಿಗದಿಪಡಿಸಬೇಕು. ಭತ್ತ ಮತ್ತು ಮೆಕ್ಕೆಜೋಳಕ್ಕೆ ಸದ್ಯ ₹25 ಸಾವಿರ ಹಂಚಿಕೆ ಮಾಡಲಾಗುತ್ತಿದ್ದು, ಇದನ್ನು ₹1 ಸಾವಿರಕ್ಕೆ ಏರಿಸಿ, ₹26 ಸಾವಿರ ನೀಡಬೇಕು ಎಂಬ ಪ್ರಸ್ತಾವ ಕಳುಹಿಸಲು ಸಭೆ ಸಮ್ಮಿತಿಸಿತು.

ADVERTISEMENT

ಸಭೆಯಲ್ಲಿ ಕೆ.ಡಿ‌.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ ನಾಯಕ, ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ್, ಇತರ ಅಧಿಕಾರಿಗಳು ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.