ADVERTISEMENT

ಸಾಗರಮಾಲಾ ವಿರೋಧಿಸಿ ಕಾರವಾರದಲ್ಲಿ ಬೃಹತ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 8:49 IST
Last Updated 16 ಜನವರಿ 2020, 8:49 IST
ಕಾರವಾರದಲ್ಲಿ ಸಾಗರಮಾಲಾ ಯೋಜನೆ ವಿರೋಧಿಸಿ ಪ್ರತಿಭಟನಾ ಮೆರವಣಿಗೆ
ಕಾರವಾರದಲ್ಲಿ ಸಾಗರಮಾಲಾ ಯೋಜನೆ ವಿರೋಧಿಸಿ ಪ್ರತಿಭಟನಾ ಮೆರವಣಿಗೆ   
""
""
""
""
""

ಕಾರವಾರ: ಸಾಗರಮಾಲಾ ಯೋಜನೆ ವಿರೋಧಿಸಿ ನಗರದಲ್ಲಿ ಗುರುವಾರ ಮುಂಜಾನೆಯಿಂದಲೇ ಪ್ರತಿಭಟನೆ ಆರಂಭವಾಗಿದೆ. ಬಸ್ ನಿಲ್ದಾಣ ಸೇರಿದಂತೆ ನಗರದ ಬಹುತೇಕ ರಸ್ತೆಗಳು ಬಿಕೋ ಎನ್ನುತ್ತಿವೆ. ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದಾರೆ. ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

‘ಯಾರಿಹರೋ,ಎಲ್ಲಿಹರೋ,ಕಡಲತೀರದ ರಕ್ಷಕರು,ಸ್ವಾರ್ಥ ರಾಜಕೀಯ ನಮಗೆ ಬೇಡ,ಕಡಲತೀರದ ರಕ್ಷಣೆ ಮಾಡಿ...’ ಎಂದು ಜಾನಪದ ಶೈಲಿಯ ಹಾಡಿನೊಂದಿಗೆ ಪ್ರತಿಭಟನಾಕಾರರು ಹೆಜ್ಜೆ ಹಾಕುತ್ತಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಹೆದ್ದಾರಿಯ ಹೊರಭಾಗದಲ್ಲಿ ಸಾಗುವ ವಾಹನಗಳ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ನಗರದ ಒಳಭಾಗದಿಂದ ಸಾಗುವಂತೆ ಪರ್ಯಾಯ ವ್ಯವಸ್ಥೆಯನ್ನು ಪೊಲೀಸರು ಕಲ್ಪಿಸಿದ್ದಾರೆ.

ADVERTISEMENT

ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಸಂಚರಿಸಲಿರುವ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಬೇಕು ಎಂದುಕೊಂಡಿದ್ದರು. ಜಿಲ್ಲಾಧಿಕಾರಿಯೇ ಪ್ರತಿಭಟನಾಕಾರರು ಸೇರಿದ್ದಲ್ಲಿಗೆ ಬಂದು ಮನವಿ ಸ್ವೀಕರಿಸಿದರು.ಮೆರವಣಿಗೆ ಹಿನ್ನೆಲೆಯಲ್ಲಿರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲ ಸಮಯ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಬಿಕೋ ಎನ್ನುತ್ತಿರುವ ಕಾರವಾರ ಬಸ್ ನಿಲ್ದಾಣ
ಪ್ರತಿಭಟನಾ ಮೆರವಣಿಗೆ
ಪ್ರತಿಭಟನಾ ಸಭೆ
ಪ್ರತಿಭಟನಾ ಮೆರವಣಿಗೆ
ಪ್ರತಿಭಟನಾ ಮೆರವಣಿಗೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.