ADVERTISEMENT

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಿರಸಿಯಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 6:42 IST
Last Updated 28 ಸೆಪ್ಟೆಂಬರ್ 2020, 6:42 IST
ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು
ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು   

ಶಿರಸಿ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮಾರಿಕಾಂಬಾ ದೇವಾಲಯದ ಎದುರು ಮೆರವಣಿಗೆ ಆರಂಭಿಸಲಾಯಿತು. ಬಳಿಕ ಐದು ರಸ್ತೆ ಸರ್ಕಲ್, ಸಿ.ಪಿ ಬಜಾರ್ ಮಾರ್ಗವಾಗಿ ನಟರಾಜ ರಸ್ತೆಯ ಮೂಲಕ ಹಳೆ ಬಸ್ ನಿಲ್ದಾಣದ ವೃತ್ತದವರೆಗೆ ತಲುಪಿದರು.
ಸರ್ಕಾರರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರೈತ, ಜನಪರ ಸಂಘಟನೆಗಳಿಗೆ ಕಾಂಗ್ರೆಸ್ ಜಿಲ್ಲಾ ಘಟಕ ಸಾಥ್ ನೀಡಿತು. ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಶಿರಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸಿಐಟಿಯು ಇನ್ನಿತರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.