ADVERTISEMENT

ಜನಪ್ರತಿನಿಧಿಗಳ ಮನೆ ಎದುರು ಧರಣಿ: ರವೀಂದ್ರ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2022, 15:50 IST
Last Updated 5 ಏಪ್ರಿಲ್ 2022, 15:50 IST
ಶಿರಸಿ ತಾಲ್ಲೂಕಿನ ಬಿಸಲಕೊಪ್ಪದಲ್ಲಿ ನಡೆದ ಅರಣ್ಯವಾಸಿಗಳನ್ನು ಉಳಿಸಿ ಜಾಥಾ ಸಭೆ
ಶಿರಸಿ ತಾಲ್ಲೂಕಿನ ಬಿಸಲಕೊಪ್ಪದಲ್ಲಿ ನಡೆದ ಅರಣ್ಯವಾಸಿಗಳನ್ನು ಉಳಿಸಿ ಜಾಥಾ ಸಭೆ   

ಶಿರಸಿ: ಎರಡು ತಿಂಗಳೊಳಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್‍ನಲ್ಲಿ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸದೇ ಭೂಮಿ ಹಕ್ಕು ನೀಡುವ ವಾಗ್ದಾನ ಪ್ರಮಾಣ ಪತ್ರ ಸಲ್ಲಿಸಬೇಕು. ಇಲ್ಲದಿದ್ದಲ್ಲಿರಾಜ್ಯದಾದ್ಯಂತ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಎಚ್ಚರಿಸಿದರು.

ತಾಲ್ಲೂಕಿನ ಬಿಸಲಕೊಪ್ಪದಲ್ಲಿ ಸೋಮವಾರ ನಡೆದ ಅರಣ್ಯವಾಸಿಗಳನ್ನ ಉಳಿಸಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಬಂದು ಒಂದೂವರೆ ದಶಕ ಕಳೆದರೂ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ, ಕಾನೂನು ಅಜ್ಞಾನದಿಂದ ಕಾಯ್ದೆ ಜಾರಿಯಲ್ಲಿ ವೈಫಲ್ಯ ಉಂಟಾಗಿದೆ’ ಎಂದು ಆರೋಪಿಸಿದರು.

ಎಸ್.ಜಿ.ಭಟ್ಟ ಉಲ್ಲಾಳ, ನೆಹರೂ ನಾಯ್ಕ ಬಿಳೂರು, ಎಂ.ಆರ್.ನಾಯ್ಕ ಕಂಡ್ರಾಜಿ, ಸರೋಜಿನಿ ಭಟ್ಟ ಬಿಸಲಕೊಪ್ಪ, ಬಿಳ್ಯಪ್ಪ ಗೌಡ, ಕಾರ್ಮೆಲ್ ಫರ್ನಾಂಡಿಸ್ ಎಕ್ಕಂಬಿ, ಮೂಡುರು ಸಿದ್ದನ ಗೌಡ, ನಾಗಪ್ಪ ಯಾಲಕ್ಕಿ ಇದ್ದರು.

ADVERTISEMENT

ವೆಂಕಟೇಶ್ ಬೈಂದೂರ್ ಸ್ವಾಗತಿಸಿದರು. ದಾಕಪ್ಪ ಮಡಿವಾಳ ನಿರೂಪಣೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.