ADVERTISEMENT

ಶುದ್ಧ ಕುಡಿಯುವ ನೀರಿ ಪೂರೈಸಿ: ಶಾಸಕ ಆರ್.ವಿ. ದೇಶಪಾಂಡೆ ಸೂಚನೆ

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 29 ಮೇ 2025, 14:09 IST
Last Updated 29 ಮೇ 2025, 14:09 IST
<div class="paragraphs"><p>ಹಳಿಯಾಳ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಹಳಿಯಾಳ, ದಾಂಡೇಲಿ, ಜೋಯಿಡಾ ಭಾಗದಲ್ಲಿ ಮುಂಗಾರು ಪೂರ್ವತಯಾರಿ ಕುರಿತು ನಡೆದ ಸಭೆಯಲ್ಲಿ ಶಾಸಕ ಆರ್‌.ವಿ. ದೇಶಪಾಂಡೆ ಮಾತನಾಡಿದರು. ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ, ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಎಂ. ನಾಗರಾಜ ಪಾಲ್ಗೊಂಡಿದ್ದರು</p></div>

ಹಳಿಯಾಳ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಹಳಿಯಾಳ, ದಾಂಡೇಲಿ, ಜೋಯಿಡಾ ಭಾಗದಲ್ಲಿ ಮುಂಗಾರು ಪೂರ್ವತಯಾರಿ ಕುರಿತು ನಡೆದ ಸಭೆಯಲ್ಲಿ ಶಾಸಕ ಆರ್‌.ವಿ. ದೇಶಪಾಂಡೆ ಮಾತನಾಡಿದರು. ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ, ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಎಂ. ನಾಗರಾಜ ಪಾಲ್ಗೊಂಡಿದ್ದರು

   

ಹಳಿಯಾಳ: ‘ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಯ ಜೊತೆಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ಆಗುವಂತೆ ಪಂಚಾಯಿತಿ ಮಟ್ಟದ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಹಳಿಯಾಳ, ದಾಂಡೇಲಿ, ಜೋಯಿಡಾ ಭಾಗಗಳಲ್ಲಿನ ಮುಂಗಾರು ಪೂರ್ವತಯಾರಿ ಸಭೆಯಲ್ಲಿ ಮಾತನಾಡಿದರು.

ADVERTISEMENT

‘ಜನರಿಗೆ ಕೇವಲ ನೀರು ಪೂರೈಸಿದರೆ ಸಾಲದು ನೀರಿನ ಶುದ್ಧೀಕರಣ ಘಟಕ ಹಾಗೂ ಶುದ್ಧವಾದ ನೀರಿನ ಪೂರೈಕೆಯೂ ಆಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಂದು ಪಂಚಾಯಿತಿ ಮಟ್ಟದ ಅಧಿಕಾರಿ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗದ ಚಿಕಿತ್ಸೆಗಾಗಿ ತೆರೆಯಲಾಗಿದ್ದು, ಆಸ್ಪತ್ರೆಯಲ್ಲಿ ಔಷಧಿಯ ದಾಸ್ತಾನು ಹಾಗೂ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ಪರಿಶೀಲಿಸಬೇಕು’ ಎಂದು ಸೂಚಿಸಿದರು.

‘ಮಳೆಗಾಲದ ಮುನ್ನವೇ ಒಂದು ವಾರದಿಂದ ನಿರಂತರವಾಗಿ ತಾಲ್ಲೂಕಿನಾದ್ಯಂತ ಮಳೆ ಪ್ರಾರಂಭವಾಗಿದ್ದು, ಅಲ್ಲಲ್ಲಿ ಮಳೆ ನೀರು ನಿಂತು, ಸಾಂಕ್ರಾಮಿಕ ರೋಗ ತಡೆಗಟ್ಟಲು ಫಾಂಗಿಂಗ್ ಮಾಡಿ’ ಎಂದು ತಿಳಿಸಿದರು.

‘ತಾಲ್ಲೂಕಿನ ಎಲ್ಲಾ ಕೆರೆ ಭಾಗಗಳಲ್ಲಿ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿರಿ. ಜೂನ್ 5 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ಸಂಘ, ಸಂಸ್ಥೆಗಳ ಸಹಕಾರದಿಂದ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಿ. ರಸ್ತೆ ಅಂಚಿನಲ್ಲಿ ಹಾಗೂ ಗ್ರಾಮದಲ್ಲಿ ಅಪಾಯಕಾರಿ ಮರಗಳಿದ್ದರೆ ಅವುಗಳನ್ನು ಅರಣ್ಯ ಇಲಾಖೆ ಸಹಾಯದೊಂದಿಗೆ ತೆರವುಗೊಳಿಸಿರ’ ಎಂದರು.

ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಂಗಾರಿನ ಪೂರ್ವಸಿದ್ಧತೆ ಕುರಿತು ವಿವರಿಸಿದರು. ಪುರಸಭೆ ಮುಖ್ಯಾಧಿಕಾರಿ ಅಶೋಕ ಸಾಳೆನ್ನವರ, ತಹಶೀಲ್ದಾರ್ ಪ್ರವೀಣ ಹುಚ್ಚಣ್ಣವರ, ದಾಂಡೇಲಿ ತಹಶೀಲ್ದಾರ್ ಶೈಲೇಶ ಪರಮಾನಂದ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ವಿಲಾಸರಾಜ ಪ್ರಸನ್ನ ಮತ್ತಿತರರು ಅಧಿಕಾರಿಗಳು ಆಯಾ ಇಲಾಖೆಯ ಮುಂಗಾರು ಹಂಗಾಮಿನಲ್ಲಿ ಕೈಗೊಳ್ಳುವ ಕಾರ್ಯಗಳ ಕುರಿತು ವಿವರಿಸಿದರು.

ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ, ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಎಂ. ನಾಗರಾಜ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.