ADVERTISEMENT

ಉತ್ತರ ಕನ್ನಡ | ಮೌಲ್ಯಮಾಪನ ಕೇಂದ್ರ ಆರಂಭಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ಮೇ 2020, 12:28 IST
Last Updated 26 ಮೇ 2020, 12:28 IST
ಜಿಲ್ಲೆಯಲ್ಲಿ ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆ ಮೌಲ್ಯಮಾಪನ ಕೇಂದ್ರ ತೆರೆಯುವಂತೆ ಒತ್ತಾಯಿಸಿ ರಾಜ್ಯ ಪದವಿಪೂರ್ವ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು
ಜಿಲ್ಲೆಯಲ್ಲಿ ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆ ಮೌಲ್ಯಮಾಪನ ಕೇಂದ್ರ ತೆರೆಯುವಂತೆ ಒತ್ತಾಯಿಸಿ ರಾಜ್ಯ ಪದವಿಪೂರ್ವ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು   

ಕಾರವಾರ: ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆ ಉತ್ತರ‍ಪತ್ರಿಕೆಗಳ ಮೌಲ್ಯಮಾಪನ ಕೇಂದ್ರವನ್ನು ಜಿಲ್ಲೆಗೆ ಮಂಜೂರು ಮಾಡಬೇಕು ಎಂದು ರಾಜ್ಯ ಪದವಿಪೂರ್ವ ನೌಕರರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ.

ಈ ಸಂಬಂದ ಸಂಘದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್ ಮೂಲಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಬೆಂಗಳೂರು, ಮಂಗಳೂರು, ಬೆಳಗಾವಿ ಹಾಗೂ ಹುಬ್ಬಳ್ಳಿ ಮುಂತಾದ ಮೌಲ್ಯಮಾಪನ ಕೇಂದ್ರಗಳಿಗೆ ಹಾಜರಾಗಲು ಉಪನ್ಯಾಸಕರಿಗೆ ಪಿ.ಯು ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ.ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಈಸಂದಿಗ್ಧ ಸನ್ನಿವೇಶದಲ್ಲಿ ಆರೋಗ್ಯ, ಪ್ರಯಾಣ, ವಾಸ್ತವ್ಯ ಹಾಗೂ ಊಟೋಪಚಾರಕ್ಕೆ ತೊಂದರೆಯಾಗಲಿದೆ. ಇದರಿಂದ ಮೌಲ್ಯಮಾಪಕರು ವಿನಾ ಕಾರಣ ತೊಂದರೆಗೀಡಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲಾಮಟ್ಟದಲ್ಲಿ ಮೌಲ್ಯಮಾಪನಕ್ಕೆ ಅನುಮತಿ ನೀಡಿದರೆ ಆಯಾ ವಿಷಯಗಳ ಉಪನ್ಯಾಸಕರು ದಿನವೂ ತಮ್ಮ ಊರುಗಳಿಂದ ಪ್ರಯಾಣಿಸಲು ಅನುಕೂಲವಾಗುತ್ತದೆ. ಆದ್ದರಿಂದ ಜಿಲ್ಲೆಯ ಮಧ್ಯಭಾಗದಲ್ಲಿರುವ ಕುಮಟಾದಲ್ಲಿ ಮೂಲ ಸೌಕರ್ಯಗಳಿರುವ ಕಾಲೇಜಿನಲ್ಲಿ ಮೌಲ್ಯಮಾಪನ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.