ADVERTISEMENT

ಅಂಕೋಲಾ: ತುಕ್ಕು ಹಿಡಿಯುತ್ತಿರುವ ಶುದ್ಧ ನೀರಿನ ಘಟಕ

20 ಗ್ರಾಮಗಳಲ್ಲಿ ಪರಿಶೀಲಿಸಿದ ತಾ.ಪಂ ಅಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2019, 15:00 IST
Last Updated 1 ಜೂನ್ 2019, 15:00 IST
ಅಂಕೋಲಾ ತಾಲ್ಲೂಕಿನ ಗ್ರಾಮವೊಂದರಲ್ಲಿ ಶುದ್ಧ ನೀರಿನ ಘಟಕವನ್ನು ತಾ.ಪಂ ಅಧ್ಯಕ್ಷೆ ಸುಜಾತಾ ಗಾಂವಕರ ಶನಿವಾರ ಪರಿಶೀಲಿಸಿದರು
ಅಂಕೋಲಾ ತಾಲ್ಲೂಕಿನ ಗ್ರಾಮವೊಂದರಲ್ಲಿ ಶುದ್ಧ ನೀರಿನ ಘಟಕವನ್ನು ತಾ.ಪಂ ಅಧ್ಯಕ್ಷೆ ಸುಜಾತಾ ಗಾಂವಕರ ಶನಿವಾರ ಪರಿಶೀಲಿಸಿದರು   

ಅಂಕೋಲಾ:‘ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯು ಈವರೆಗೆಗ್ರಾಮಸ್ಥರ ಬಾಯಾರಿಕೆ ನೀಗಿಸುತ್ತಿಲ್ಲ.ಇದು ಬೇಸರದ ಸಂಗತಿಯಾಗಿದೆ.ಜಿಲ್ಲಾಧಿಕಾರಿ ಈ ಬಗ್ಗೆ ಕೂಡಲೇ ಕ್ರಮವಹಿಸಿ ಯೋಜನೆಯ ಸದುಪಯೋಗಆಗುವಂತೆ ನೋಡಿಕೊಳ್ಳಬೇಕು’ ಎಂದುತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಗಾಂವಕರ ಹೇಳಿದರು.

ತಾಲ್ಲೂಕಿನ 20 ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶನಿವಾರಪರಿಶೀಲನೆ ನಡೆಸಿ ಅವರು ಮಾತನಾಡಿದರು.

‘ಎಲ್ಲೆಡೆ ಹನಿ ನೀರಿಗೆ ಹಾಹಾಕಾರ ಎದುರಾಗಿದೆ. ಶುದ್ದ ನೀರಿನ ಘಟಕಗಳು ಸುಸ್ತಿಗೆ ಬಂದರೆಸಮಸ್ಯೆಗೆ ಪರಿಹಾರ ಸಿಗಬಹುದು. ಕೂಡಲೇ ಜನರ ಬವಣೆಗೆ ಸ್ಪಂದಿಸುವ ಕಾರ್ಯ ಆಗಬೇಕಿದೆ. ಇದೆನ್ನೆಲ್ಲಕಂಡು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಕ್ರಮ ಕೈಗೊಳ್ಳದಿರುವುದು ಖಂಡನೀಯ’ಎಂದರು.

ADVERTISEMENT

ತಾಲ್ಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ನಾಯ್ಕ ಮಾತನಾಡಿ, ‘ಅನೇಕ ಗ್ರಾಮಗಳಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿಎರಡುವರ್ಷ ಕಳೆಯುತ್ತಬಂದಿದೆ. ಪರಿಕರಗಳು ಮಳೆ, ಬಿಸಿಲಿಗೆ ತುಕ್ಕು ಹಿಡಿದಿವೆ. ಕರಾವಳಿ ಭಾಗದಲ್ಲಿ ಉಪ್ಪಿನ ತೇವಾಂಶ ಇರುವುದರಿಂದ ಬೇಗ ತುಕ್ಕು ಹಿಡಿಯುತ್ತವೆ. ಆದರೆ, ಗುತ್ತಿಗೆ ಪಡೆದ ಕಂಪೆನಿಗಳಿಗೆ ಇದ್ಯಾವುದರ ಚಿಂತೆಯೂ ಇಲ್ಲ. ಇಂತಹ ಬೇಜವಾಬ್ದಾರಿಸಂಸ್ಥೆಗಳವಿರುದ್ಧ ಕ್ರಮ ಕೈಗೊಳ್ಳಬೇಕು’ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಉದಯ ನಾಯ್ಕ, ತಾಲ್ಲೂಕು ಪಂಚಾಯ್ತಿ ಸದಸ್ಯ ಸಂಜೀವ ಕುಚನಾಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.