ADVERTISEMENT

‘ರಾಣಿ ಚನ್ನಮ್ಮನ ಸಾಹಸ ದೊಡ್ಡ ಮೈಲಿಗಲ್ಲು’

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 15:26 IST
Last Updated 23 ಅಕ್ಟೋಬರ್ 2021, 15:26 IST
ಕಾರವಾರದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮವನ್ನು ನಗರಸಭೆ ಉಪಾಧ್ಯಕ್ಷ ಪ್ರಕಾಶ.ಪಿ.ನಾಯ್ಕ ಉದ್ಘಾಟಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಜಿ.ನಾಯ್ಕ ಇದ್ದಾರೆ.
ಕಾರವಾರದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮವನ್ನು ನಗರಸಭೆ ಉಪಾಧ್ಯಕ್ಷ ಪ್ರಕಾಶ.ಪಿ.ನಾಯ್ಕ ಉದ್ಘಾಟಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಜಿ.ನಾಯ್ಕ ಇದ್ದಾರೆ.   

ಕಾರವಾರ: ‘ಸಣ್ಣ ಸಂಸ್ಥಾನದ ರಾಣಿ ಕಿತ್ತೂರು ಚನ್ನಮ್ಮ, ಬೃಹತ್ ಬ್ರಿಟಿಷ್ ಸೈನ್ಯವನ್ನು ಎದುರಿಸಲು ತೋರಿದ ಧೈರ್ಯ ಮತ್ತು ಸಾಹಸವು ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ದೊಡ್ಡ ಮೈಲಿಗಲ್ಲು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ನಗರಸಭೆಯ ಉಪಾಧ್ಯಕ್ಷ ಪ್ರಕಾಶ.ಪಿ.ನಾಯ್ಕ, ‘ಕಿತ್ತೂರು ರಾಣಿ ಚನ್ನಮ್ಮ ಅವರ ಧೈರ್ಯ ಸ್ಥೈರ್ಯ ಎಲ್ಲರಿಗೂ ಮಾದರಿ’ ಎಂದರು.

ADVERTISEMENT

ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ವೆಂಕಟೇಶ ಗಿರಿ ಉಪನ್ಯಾಸ ನೀಡಿ, ‘ನಾವು ಕೇವಲ ವ್ಯಕ್ತಿಗಳಾಗದೇ ವ್ಯಕ್ತಿತ್ವವಾಗಿ ರೂಪುಗೊಳ್ಳಬೇಕು. ಸ್ವಾಭಿಮಾನದ ಪ್ರತೀಕವಾಗಿ ಬದುಕಿನ ಕೊನೆಯವರೆಗೂ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಚನ್ನಮ್ಮ ಅವರ ವ್ಯಕ್ತಿತ್ವ ನಮ್ಮೆಲ್ಲರಿಗೂ ಸ್ಫೂರ್ತಿ’ ಎಂದು ಬಣ್ಣಿಸಿದರು.

ತಹಶೀಲ್ದಾರ್ ಎನ್.ಎಫ್.ನರೋನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಜಿ.ನಾಯ್ಕ, ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಜಯಾ ಡಿ.ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.