ADVERTISEMENT

ಉತ್ತರ ಕನ್ನಡದ ವಿವಿಧೆಡೆ ಅಕಾಲಿಕ ಮಳೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 6:47 IST
Last Updated 28 ನವೆಂಬರ್ 2022, 6:47 IST
   

ಕಾರವಾರ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಬೆಳಿಗ್ಗೆಯಿಂದ ಆಗಾಗ ಸಾಧಾರಣ ಮಳೆಯಾಗುತ್ತಿದೆ. ದಟ್ಟವಾದ ಮೋಡ ಕವಿದ ವಾತಾವರಣವಿದ್ದು, ಮಳೆಗಾಲದ ವಾತಾವರಣ ನೆನಪಿಸುವಂತಿದೆ.

ಕರಾವಳಿಯ ಭಟ್ಕಳ, ಹೊನ್ನಾವರ, ಕುಮಟಾ, ಗೋಕರ್ಣದಲ್ಲಿ ಮುಂಜಾನೆಯಿಂದಲೇ ವರ್ಷಧಾರೆಯಾಗಿದೆ. ಜೊಯಿಡಾ, ದಾಂಡೇಲಿ, ಯಲ್ಲಾಪುರ ಭಾಗದಲ್ಲೂ ಮಳೆಯಾಗಿದೆ.

ಅಕಾಲಿಕ ಮಳೆಯಿಂದಾಗಿ ಭತ್ತ ಮತ್ತು ಮೆಕ್ಕೆಜೋಳ ಕೃಷಿಕರು ಚಿಂತೆಗೀಡಾಗಿದ್ದಾರೆ. ಬಹುತೇಕ ಕಡೆಗಳಲ್ಲಿ ಭತ್ತದ ಕಟಾವು ಮುಕ್ತಾಯವಾಗಿದೆ. ಪೈರನ್ನು ಹೊಲಗಳಲ್ಲಿ ಮತ್ತು ಮನೆಯಂಗಳದಲ್ಲಿ ಸಂಗ್ರಹಿಸಿಟ್ಟಿದ್ದು, ಮಳೆ ನೀರಿನಿಂದ ಸಂರಕ್ಷಿಸುವುದು ದೊಡ್ಡ ಸವಾಲಾಗಿದೆ. ಹಾಗಾಗಿ ಸರ್ಕಾರವು ಸಾಮಾನ್ಯ ಭತ್ತದ ಖರೀದಿ ಕೇಂದ್ರವನ್ನು ಶೀಘ್ರವೇ ಆರಂಭಿಸಬೇಕು ಎಂಬ ಒತ್ತಾಯ ರೈತರದ್ದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.