
ಪ್ರಜಾವಾಣಿ ವಾರ್ತೆಬಂಧನ
(ಪ್ರಾತಿನಿಧಿಕ ಚಿತ್ರ)
ಕಾರವಾರ: ಇಲ್ಲಿನ ಖಾಸಗಿ ಆಸ್ಪತ್ರೆ ಸಿಬ್ಬಂದಿ ರಾಜೀವ ಪಿಕಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಠಾಣೆ ಪೊಲೀಸರು ಮೂವರನ್ನು ಶನಿವಾರ ಬಂಧಿಸಿದ್ದಾರೆ.
ಕಾರವಾರ ತಾಲ್ಲೂಕಿನ ವೈಲವಾಡ ಗ್ರಾಮದವರಾದ ಅನಿಲ ನಾಯ್ಕ, ಹರಿಶ್ಚಂದ್ರ ನಾಯ್ಕ, ಸುಭಾಶ ನಾಯ್ಕ ಬಂಧಿತ ಆರೋಪಿಗಳು.
ಆಸ್ಪತ್ರೆಯಲ್ಲಿ ಔಷಧ ವಿಭಾಗ ನಿರ್ವಹಣೆ ಮಾಡುತ್ತಿದ್ದ ರಾಜೀವ ಪಿಕಳೆ ಅವಧಿ ಮೀರಿದ ಔಷಧ ನೀಡಿದ್ದಾರೆಂದು ವ್ಯಕ್ತಿಯೊಬ್ಬರು ತರಾಟೆಗೆ ತೆಗೆದುಕೊಂಡಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರಿಂದ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.
‘ರಾಜೀವ್ ಅವರನ್ನು ತರಾಟೆಗೆ ತೆಗೆದುಕೊಂಡ ದೃಶ್ಯವನ್ನು ಈ ಮೂವರು ಆರೋಪಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.