ADVERTISEMENT

ಮೌಲ್ಯಾಧಾರಿತ ರಾಜಕಾರಣಿ ರಾಮಕೃಷ್ಣ ಹೆಗಡೆ: ಕಾಗೇರಿ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 13:31 IST
Last Updated 29 ಆಗಸ್ಟ್ 2021, 13:31 IST
ಶಿರಸಿಯ ಯಲ್ಲಾಪುರ ನಾಕಾದಲ್ಲಿರುವ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಪುತ್ಥಳಿಗೆ ಗೌರವಾರ್ಪಣೆ ಬಳಿಕ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದರು
ಶಿರಸಿಯ ಯಲ್ಲಾಪುರ ನಾಕಾದಲ್ಲಿರುವ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಪುತ್ಥಳಿಗೆ ಗೌರವಾರ್ಪಣೆ ಬಳಿಕ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದರು   

ಶಿರಸಿ: ಸಂಸದೀಯ ಮೌಲ್ಯಗಳು ಕುಸಿಯುತ್ತಿರುವ ಈಗಿನ ಸಂದರ್ಭದಲ್ಲಿ ರಾಮಕೃಷ್ಣ ಹೆಗಡೆ ಮೌಲ್ಯಗಳು ಪ್ರಸ್ತುತ ಎನಿಸುತ್ತವೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಜನ್ಮದಿನದ ಅಂಗವಾಗಿ ನಗರದ ಯಲ್ಲಾಪುರ ನಾಕಾದಲ್ಲಿರುವ ಆವರ ಪುತ್ಥಳಿಗೆ ಭಾನುವಾರ ಮಾಲಾರ್ಪಣೆ ಮಾಡಿ ಮಾತನಾಡಿದರು.

‘ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಗಡೆ ಮಾರ್ಗದರ್ಶಿಯಾಗಿದ್ದಾರೆ. ವಿಕೇಂದ್ರೀಕರಣವ್ಯವಸ್ಥೆಯಲ್ಲಿ ಬದಲಾವಣೆ ತಂದು ಮಾದರಿ ಆಡಳಿತ ನೀಡಿದ್ದರು. ಅವರ ಆದರ್ಶ ಈಗಿನ ರಾಜಕಾರಣಿಗಳು ಪಾಲಿಸಬೇಕು' ಎಂದರು.

ADVERTISEMENT

ರಾಮಕೃಷ್ಣ ಹೆಗಡೆ ಅಭಿಮಾನಿ ಬಳಗದ ಪ್ರಮುಖ ವೆಂಕಟೇಶ ಹೆಗಡೆ ಹೊಸಬಾಳೆ, ‘ಯಲ್ಲಾಪುರ ನಾಕಾ ಮುಖ್ಯ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರಿಡಬೇಕು. ಅವರ ಹೆಸರಿನಲ್ಲಿ ಸಂಸದೀಯ ಮೌಲ್ಯಗಳ ಕುರಿತು ಅಧ್ಯಯನ ಪೀಠ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.

ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ಪ್ರಮುಖರಾದ ಗೋವಿಂದ ಶಾನಭಾಗ, ದೀಪಕ ದೊಡ್ಡೂರು, ಶ್ರೀಪಾದ ರಾಯ್ಸದ್, ಆರ್.ಎಂ.ಹೆಗಡೆ ಹಲ್ಲುಸರಿಗೆ, ಜಿ.ಟಿ.ಹೆಗಡೆ ತಟ್ಟೀಸರ, ರಮೇಶ ದುಬಾಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.