ADVERTISEMENT

ಭಾರಿ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಜುಲೈ 14ರವರೆಗೆ ರೆಡ್ ಅಲರ್ಟ್

​ಪ್ರಜಾವಾಣಿ ವಾರ್ತೆ
Published 10 ಜುಲೈ 2022, 13:08 IST
Last Updated 10 ಜುಲೈ 2022, 13:08 IST
ಮಳೆ
ಮಳೆ    

ಕಾರವಾರ: ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 14ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ನಾಲ್ಕು ದಿನ ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ರಾಜ್ಯ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.

‌ಉತ್ತರ ಕನ್ನಡದ ಮಲೆನಾಡು ತಾಲ್ಲೂಕುಗಳು ಮತ್ತು ಕರಾವಳಿಯ ಭಟ್ಕಳ, ಹೊನ್ನಾವರ, ಕುಮಟಾ ತಾಲ್ಲೂಕುಗಳಲ್ಲಿ ಭಾನುವಾರ ದಿನವಿಡೀ ಉತ್ತಮ ಮಳೆಯಾಗಿದೆ. ಕಾರವಾರದಲ್ಲಿ ಬೆಳಿಗ್ಗೆ ಒಂದೆರಡು ತಾಸು ಅಬ್ಬರದ ವರ್ಷಧಾರೆಯಾಯಿತು. ಜಿಲ್ಲೆಯಾದ್ಯಂತ ದಟ್ಟವಾದ ಮೋಡ ಕವಿದ ವಾತಾವರಣವಿತ್ತು.

ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 12 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಕದ್ರಾ ಜಲಾಶಯಕ್ಕೆ ಒಳಹರಿವು ಉತ್ತಮವಾಗಿ ಮುಂದುವರಿದಿದೆ. ಹಾಗಾಗಿ ಭಾನುವಾರ ಬೆಳಿಗ್ಗೆ 8ರವರೆಗೆ ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್‌ಗಳ ಮೂಲಕ 27 ಸಾವಿರ ಕ್ಯುಸೆಕ್ ನೀರನ್ನು ಕಾಳಿ ನದಿಗೆ ಹರಿಸಲಾಗಿದೆ. ಜಲಾಶಯದ ಕೆಳಭಾಗದ ನದಿಯಲ್ಲಿ ನೀರು ಭರ್ತಿಯಾಗಿ ಹರಿಯುತ್ತಿದ್ದು, ಮಳೆ ಮುಂದುವರಿದರೆ ಅಪಾಯದ ಮಟ್ಟ ಮೀರುವ ಸಾಧ್ಯತೆಯಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.