ADVERTISEMENT

ಅರಣ್ಯ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ: ಸಚಿವ ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2019, 4:41 IST
Last Updated 26 ಜನವರಿ 2019, 4:41 IST
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.   

ಕಾರವಾರ: ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಅರಣ್ಯ ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿ ಇರುವ ಗೊಂದಲಗಳ ನಿವಾರಣೆಗೆ ಕಂದಾಯ ಮತ್ತು ಅರಣ್ಯ ಇಲಾಖೆಗಳಿಂದ ಜಂಟಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಸಿದರು.

ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ಮಾಡಿ ಅವರು ಮಾತನಾಡಿದರು.

ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಹಕ್ಕುಪತ್ರ ನೀಡಲು ಈ ಗೊಂದಲ ಅಡ್ಡಿಯಾಗುತ್ತಿದೆ. ಎರಡೂ ಇಲಾಖೆಗಳು ಜಮೀನು ತಮ್ಮದೆಂದು ಹೇಳಿಕೊಳ್ಳುತ್ತಿವೆ. ಹೀಗಾಗಿ ಜಂಟಿ ಸಮೀಕ್ಷೆ ನಡೆಸಿದರೆ ಪರಿಹಾರ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ADVERTISEMENT

ರಾಜ್ಯದಲ್ಲಿ ಕಂದಾಯ ಭೂಮಿ ಒತ್ತುವರಿ ಮಾಡಿಕೊಂಡ ಎಲ್ಲ ಅರ್ಹ ಅರ್ಜಿದಾರರಿಗೆ 2020ರೊಳಗೆ ಹಕ್ಕುಪತ್ರ ನೀಡಲಾಗುವುದು ಎಂದೂ ತಿಳಿಸಿದರು.

‘ಪ್ರಕೃತಿ ವಿಕೋಪದಿಂದ ರಾಜ್ಯದಲ್ಲಿ ನಾಶವಾದ ಬೆಳೆಗೆ ಸಂಬಂಧಿಸಿ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯಡಿ ರೂ 2,434 ಕೋಟಿ ಪರಿಹಾರ ಕೇಳಲಾಗಿದೆ. ಹಿಂಗಾರು ಬೆಳೆಯೂ ಹಾನಿಯಾಗಿದ್ದು, ಅದಕ್ಕೂ ಪರಿಹಾರಕ್ಕೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆಯಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.