ADVERTISEMENT

ಕಾರವಾರ: ಗ್ರಾ.ಪಂ; ಪತಿ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಪತ್ನಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2022, 15:38 IST
Last Updated 26 ಆಗಸ್ಟ್ 2022, 15:38 IST
ಕಾರವಾರ ತಾಲ್ಲೂಕಿನ ಶಿರವಾಡ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಜಯ ಗಳಿಸಿದ ಅಶ್ವಿನಿ ಅವರಿಗೆ ಮಾಜಿ ಅಧ್ಯಕ್ಷ ದಿಲೀಪ ನಾಯ್ಕ ಹಾರ ತೊಡಿಸಿ ಅಭಿನಂದಿಸಿದರು
ಕಾರವಾರ ತಾಲ್ಲೂಕಿನ ಶಿರವಾಡ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಜಯ ಗಳಿಸಿದ ಅಶ್ವಿನಿ ಅವರಿಗೆ ಮಾಜಿ ಅಧ್ಯಕ್ಷ ದಿಲೀಪ ನಾಯ್ಕ ಹಾರ ತೊಡಿಸಿ ಅಭಿನಂದಿಸಿದರು   

ಕಾರವಾರ: ತಾಲ್ಲೂಕಿನ ಶಿರವಾಡ ಗ್ರಾಮ ಪಂಚಾಯಿತಿಯಲ್ಲಿ ಪತಿಯ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಪತ್ನಿ ಆಯ್ಕೆಯಾಗಿದ್ದಾರೆ.

ಈ ಗ್ರಾಮ ಪಂಚಾಯಿತಿಯಲ್ಲಿ ದಿಲೀಪ ನಾಯ್ಕ ಅಧ್ಯಕ್ಷರಾಗಿದ್ದರು. ಜುಲೈ 2ರಂದು ರಾಜೀನಾಮೆ ನೀಡಿದ್ದ ಅವರು, ‘ಗ್ರಾಮ ಪಂಚಾಯಿತಿಗೆ ಶಾಸಕರ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ. ಕಾಂಗ್ರೆಸ್ ಮುಖಂಡ ಸತೀಶ ಸೈಲ್ ಅವರ ಬೆಂಬಲಿಗರು ಹೆಚ್ಚಿರುವ ಗ್ರಾಮವೆಂದು ಅನ್ಯಾಯ ಮಾಡಲಾಗುತ್ತಿದೆ’ ಎಂದು ಆರೋಪಿಸಿದ್ದರು.

ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅವರ ಪತ್ನಿ ಅಶ್ವಿನಿ, ಅಧ್ಯಕ್ಷೆಯಾಗಿ ಆಯ್ಕೆಯಾದರು. ಬಿ.ಜೆ.ಪಿ ಬೆಂಬಲಿತ ಸದಸ್ಯರು ಅವರಿಗೆ ಬೆಂಬಲ ನೀಡಿದ್ದರು. 14 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಬಾರಿ ಕಾಂಗ್ರೆಸ್ ಮುಖಂಡ ಸತೀಶ ಸೈಲ್ ಬೆಂಬಲಿತ ಸದಸ್ಯರ ಸಹಕಾರದಿಂದ ದಿಲೀಪ ನಾಯ್ಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.