ಯಲ್ಲಾಪುರ: ʻಶಿಕ್ಷಕರು ನಿವೃತ್ತಿಯ ನಂತರವೂ ಮಕ್ಕಳ ಬಗ್ಗೆ ವಿಶೇಷ ಕಾಳಜಿ, ಕಳಕಳಿ ಹೊಂದಿ ಬದುಕು ರೂಪಿಸಿಕೊಳ್ಳಲು ಅವರಿಗೆ ಮಾರ್ಗದರ್ಶನ ಮಾಡಲಿ, ಕಲಿಸುವ ಪ್ರವೃತ್ತಿ ಮುಂದುವರಿಸಲಿʼ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಪಟ್ಟಣದ ರೈತ ಭವನದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಗುರು ಗೌರವಾರ್ಪಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಬಿಇಒ ರೇಖಾ ನಾಯ್ಕ, ಮಾತನಾಡಿ, ʻಮುಂದಿನ ದಿನಗಳ ಸೇವಾ ಅವಧಿಯನ್ನು ಹೆಚ್ಚು ಅರ್ಥಪೂರ್ಣವಾಗಿಸುವ ಸಂಕಲ್ಪ ಮಾಡೋಣʼ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಆರ್.ಭಟ್ಟ , ನಿವೃತ್ತ ಶಿಕ್ಷಕ ದಿಲೀಪ ದೊಡ್ಮನಿ, ತಾಲ್ಲೂಕುಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕ ಸತೀಶ ಶೆಟ್ಟಿ ಮಾತನಾಡಿದರು.
ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಹಾಗೂ ಸೇವಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಅಂಕೋಲಾ ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಶೆಟ್ಟಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನರ್ಮದಾ ನಾಯ್ಕ, ಉಪಾಧ್ಯಕ್ಷ ಅಮಿತ್ ಅಂಗಡಿ, ಪ್ರೌಢಶಾಲಾ ಶಿಕ್ಷಕರ ಸಂಘದ ಶಿರಸಿ ಜಿಲ್ಲಾ ಘಟಕದ ಅಧ್ಯಕ್ಷ ಅಜಯ ನಾಯಕ, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ಮಲೆನಾಡು ಸೊಸೈಟಿ ಅಧ್ಯಕ್ಷ ಎಂ.ಆರ್.ಹೆಗಡೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.