ADVERTISEMENT

ಕಾರವಾರ | ತಂಬಾಕು ಉತ್ಪನ್ನ ಮಾರಾಟ: ಎಡಿಸಿ ನೇತೃತ್ವದಲ್ಲಿ ದಾಳಿ

​ಪ್ರಜಾವಾಣಿ ವಾರ್ತೆ
Published 18 ಮೇ 2024, 14:39 IST
Last Updated 18 ಮೇ 2024, 14:39 IST
ಕಾರವಾರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಗೂಡಂಗಡಿಯೊಂದರಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್ ನೇತೃತ್ವದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು
ಕಾರವಾರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಗೂಡಂಗಡಿಯೊಂದರಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್ ನೇತೃತ್ವದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು   

ಕಾರವಾರ: ನಗರದ ವಿವಿಧೆಡೆ ಶನಿವಾರ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ತಂಬಾಕು ಉತ್ಪನ್ನಗಳ ಮಾರಾಟ ನಡೆಸುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿತು.

ಇಲ್ಲಿನ ಎಂ.ಜಿ. ರಸ್ತೆ, ಪಿಕಳೆ ರಸ್ತೆ, ಗ್ರೀನ್ ಸ್ಟ್ರೀಟ್ ಸೇರಿ ಕೆಲವೆಡೆ ಅಂಗಡಿ, ಗೂಡಂಗಡಿಗಳಿಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳ ತಂಡ ತಂಬಾಕು ಉತ್ಪನ್ನಗಳ ಮಾರಾಟ ನಡೆಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಿತು. ಈ ವೇಳೆ ಪತ್ತೆಯಾದ ಗುಟ್ಕಾ, ಸಿಗರೇಟ್ ಪೊಟ್ಟಣಗಳನ್ನು ವಶಕ್ಕೆ ಪಡೆಯಲಾಯಿತು.

ಸುಮಾರು 25ಕ್ಕೂ ಹೆಚ್ಚು ಅಂಗಡಿಕಾರರಿಗೆ ತಂಬಾಕು ಉತ್ಪನ್ನ ಮಾರಾಟ ಮಾಡಿದ್ದಕ್ಕಾಗಿ ದಂಡ ವಿಧಿಸಿ, ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.