
ಪ್ರಜಾವಾಣಿ ವಾರ್ತೆ
ಶಿರಸಿ: ‘ನದಿ ಜೋಡಣೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ವಿಶ್ವೇಶ್ವರ ಹೆಗಡೆ ಅವರು ಮನದಟ್ಟು ಮಾಡಿಕೊಡಬೇಕು’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ವಿಷಯ ಅವರಿಬ್ಬರ ನಡುವೆಯೇ ಇತ್ಯರ್ಥಗೊಳ್ಳಬೇಕು. ಸಮಸ್ಯೆಯೂ ಸಾಮರಸ್ಯದಿಂದ ಬಗೆಹರಿಯಬೇಕು’ ಎಂದರು.
‘ನದಿ ಜೋಡಣೆಯಿಂದ ಜಿಲ್ಲೆಯಲ್ಲಿ ಆಗುವ ಅಪಾಯಗಳ ಬಗ್ಗೆ ಬಸವರಾಜ ಬೊಮ್ಮಾಯಿ ಅವರಿಗೆ ಬಹುಶಃ ಮಾಹಿತಿ ಇಲ್ಲ. ನಾನು ಅವರ ಜೊತೆ ಮಾತನಾಡಲು ಸಿದ್ಧನಿದ್ದೇನೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.