
ದಾಂಡೇಲಿ: ನಗರದ ರೋಟರಿ ಕ್ಲಬ್ಬಿನ ಸಮಾಜಮುಖಿ ಸೇವಾ ಕಾರ್ಯ ಶ್ಲಾಘನೀಯವಾಗಿದೆ ಎಂದು ಡಿವೈಎಸ್ಪಿ ಶಿವಾನಂದ ಮದರಕಂಡಿ ಹೇಳಿದರು.
ಮಂಗಳವಾರ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ರೋಟರಿ ಕ್ಲಬ್ ಕೊಡುಗೆಯಾಗಿ ನೀಡಿದ 5 ಬ್ಯಾರಿಕೇಡ್ಸ್ ಸ್ವೀಕರಿಸಿ ಮಾತನಾಡಿದರು.
ಇಲಾಖೆಯ ಪ್ರತಿಯೊಂದು ಕಾರ್ಯ ಚಟುವಟಿಕೆಗಳಿಗೂ ರೋಟರಿ ಕ್ಲಬ್ ಸಹಕಾರ ನೀಡುತ್ತಿರುವುದು ಸಂತಸ ತಂದಿದೆ. ಸುರಕ್ಷಿತ, ಶಿಸ್ತುಬದ್ಧ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ಇಂತಹ ಕೊಡುಗೆ ಅವಶ್ಯಕತೆ ಇದೆ ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ಅಶುತೋಷ್ ಕುಮಾರ್ ರಾಯ ಮಾತನಾಡಿ, ಸಾರ್ವಜನಿಕ ಕಾರ್ಯಕ್ರಮಗಳು, ಹಬ್ಬಗಳು, ತುರ್ತು ಪರಿಸ್ಥಿತಿಗಳು ಮತ್ತು ವಿಶೇಷ ಕಾರ್ಯಕ್ರಮಗಳ ಸಮಯದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಪರಿಣಾಮಕಾರಿ ಜನಸಂದಣಿ ನಿಯಂತ್ರಣವನ್ನು ಕಾಪಾಡಿಕೊಳ್ಳಲು ಪೊಲೀಸ್ ಠಾಣೆಗೆ ಸಹಾಯಕವಾಗಿ ರೋಟರಿ ಕ್ಲಬ್ ಬ್ಯಾರಿಕೇಡ್ಸ್‌ಗಳನ್ನು ಹಸ್ತಾಂತರಿಸುವ ಯೋಜನೆಯನ್ನು ಹಮ್ಮಿಕೊಂಡಿದೆ ಎಂದರು.
ಪಿಎಸ್ಐಗಳಾದ ಅಮೀನ್ ಅತ್ತಾರ್, ಕಿರಣ್ ಪಾಟೀಲ್ ಮತ್ತು ಜಗದೀಶ ನಾಯ್ಕ ಮತ್ತು ರೋಟರಿ ಕಾರ್ಯದರ್ಶಿ ಮಿಥುನ್ ನಾಯಕ, ರೋಟರಿ ಕ್ಲಬ್ ಪ್ರಮುಖರಾದ ಸುಧಾಕರ ಶೆಟ್ಟಿ, ರಾಹುಲ್ ಬಾವಾಜಿ, ಅಭಿಷೇಕ ಕನ್ಯಾಡಿ, ಹವಾಲ್ದಾರ್ ಮಹಾದೇವ ಬಳೆಗಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.