ದಾಂಡೇಲಿ: ನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಮೆಗಾ ಲೋಕ ಅದಾಲತ್ ಕಾರ್ಯಕ್ರಮ ಶನಿವಾರ ನಡೆಯಿತು.
ನ್ಯಾಯಾಧೀಶೆ ರೋಹಿಣಿ ಬಸಾಪುರ ನೇತೃತ್ವದಲ್ಲಿ ನಡೆದ ಈ ಲೋಕ ಅದಾಲತ್‌ನಲ್ಲಿ 628 ಪ್ರಕರಣಗಳನ್ನು ವಿಚಾರಣೆ ಕೈಗೆತ್ತಿಕೊಂಡು 298 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ.
ವಿವಿಧ ವಿಭಾಗಗಳ ಪ್ರಕರಣಗಳ ಇತ್ಯರ್ಥದಿಂದ ₹ 12.41 ಲಕ್ಷ ದಂಡ ಸಂಗ್ರಹಿಸಲಾಗಿದೆ. ಸರ್ಕಾರಿ ಅಭಿಯೋಜಕರಾಗಿ ವಕೀಲೆ ಸುಶೀಲಾ ಜಿ.ನಾಮಧಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.