ADVERTISEMENT

‘ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ₹7.51 ಕೋಟಿ ಮಂಜೂರು’

ಸಚಿವ ಶಿವರಾಮ ಹೆಬ್ಬಾರ ಮಾಹಿತಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 12:33 IST
Last Updated 15 ಜನವರಿ 2022, 12:33 IST
ಶಿವರಾಮ ಹೆಬ್ಬಾರ
ಶಿವರಾಮ ಹೆಬ್ಬಾರ   

ಶಿರಸಿ: ಬನವಾಸಿ ಭಾಗದ ಜನರ ಬಹು ದಶಕಗಳ ಬೇಡಿಕೆಯಾಗಿರುವ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ₹7.51 ಕೋಟಿ ಮಂಜೂರಾಗಿದ್ದು ಶೀಘ್ರವೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ಇಲ್ಲಿ ಶನಿವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘110 ಕಿಲೊ ವ್ಯಾಟ್ ಸಾಮರ್ಥ್ಯದ ಉಪಕೇಂದ್ರ ನಿರ್ಮಾಣದ ಗುತ್ತಿಗೆ ಹಂತದ ಪ್ರಕ್ರಿಯೆ ಪೂರ್ಣಗೊಂಡಿದೆ. ಸದ್ಯದಲ್ಲಿಯೇ ಇಂಧನ ಸಚಿವ ಸುನಿಲಕುಮಾರ ಬನವಾಸಿಗೆ ಭೇಟಿ ನೀಡಲಿದ್ದು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ’ ಎಂದು ತಿಳಿಸಿದರು.

‘ಉಪಕೇಂದ್ರ ಸ್ಥಾಪನೆಗೊಳ್ಳದ ಪರಿಣಾಮ ಕೋಟ್ಯಂತರ ವೆಚ್ಚದ ಕೆರೆ ತುಂಬಿಸುವ ಯೋಜನೆ ಕಾರ್ಯ ಆರಂಭವಾಗಿರಲಿಲ್ಲ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಕೆರೆಗೆ ನೀರು ಹರಿಸುವ ಕೆಲಸವನ್ನೂ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ADVERTISEMENT

‘ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆ, ಹಬ್ಬ, ಉತ್ಸವಕ್ಕೆ ಅವಕಾಶ ನೀಡುತ್ತಿಲ್ಲ. ಐದಕ್ಕಿಂತ ಹೆಚ್ಚು ‌ಮಕ್ಕಳಿಗೆ ಕೋವಿಡ್ ದೃಢಪಟ್ಟರೆ, ಅಂಥ ಶಾಲೆ ಬಂದ್‌ ಮಾಡಲಾಗತ್ತಿದೆ. ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದರೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಆರ್ಥಿಕ ಚಟುವಟಿಕೆ ಮೇಲೆ ಪೆಟ್ಟು ಬೀಳದಂತೆ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.