ADVERTISEMENT

ಅಧಿಕಾರಶಾಹಿ ಅಹಂಕಾರಕ್ಕೆ ಪೆಟ್ಟು: ಭೀಮಣ್ಣ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2021, 15:04 IST
Last Updated 19 ನವೆಂಬರ್ 2021, 15:04 IST
ಕೇಂದ್ರ ಸರ್ಕಾರ ಕೃಷಿ ಮಸೂದೆ ಹಿಂಪಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿದರು.
ಕೇಂದ್ರ ಸರ್ಕಾರ ಕೃಷಿ ಮಸೂದೆ ಹಿಂಪಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿದರು.   

ಶಿರಸಿ: ಅಧಿಕಾರದ ಮದದಲ್ಲಿ ದೇಶದ ಬೆನ್ನೆಲುಬು ರೈತರ ಹಿತಕ್ಕೆ ವಿರುದ್ಧವಾಗಿ ಹೊರಟಿದ್ದ ಕೇಂದ್ರ ಸರ್ಕಾರದ ಅಹಂಕಾರಕ್ಕೆ ಪಟ್ಟು ಬಿದ್ದಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಹೇಳಿದರು.

ಕೇಂದ್ರ ಸರ್ಕಾರ ಪ್ರಮುಖ ಮೂರು ಕೃಷಿ ಮಸೂದೆ ಹಿಂಪಡೆದ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರೈತರ ಪ್ರಬಲ ವಿರೋಧವಿದ್ದರೂ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮಸೂದೆ ಜಾರಿಗೆ ತಂದಿತ್ತು. ಛಲ ಬಿಡದೆ ರೈತರು, ವಿರೋಧ ಪಕ್ಷಗಳು ನಡೆಸಿದ ಹೋರಾಟಕ್ಕೆ ಮಣಿದು ಮಸೂದೆ ಹಿಂಪಡೆಯಿತು’ ಎಂದರು.

ಕಾಂಗ್ರೆಸ್ ಕಿಸಾನ್ ವಿಭಾಗದ ತಾಲ್ಲೂಕು ಘಟಕದ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದರು. ರೈತರು, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ADVERTISEMENT

ಶಿರಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ, ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ, ಪ್ರಮುಖರಾದ ದೀಪಕ ದೊಡ್ಡೂರು, ಬಸವರಾಜ ದೊಡ್ಮನಿ, ಶ್ರೀಪಾದ ಹೆಗಡೆ ಕಡವೆ, ಪ್ರವೀಣ ಹೆಗಡೆ ಮಣ್ಮನೆ, ಅರುಣ ಪ್ರಭು, ಖಾದರ ಅನವಟ್ಟಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.