ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಕುರಿತ ಪತ್ರಕರ್ತೆಯೊಬ್ಬರು ಕೇಳಿದ ಪ್ರಶ್ನೆಗೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ನೀಡಿದ ಪ್ರತಿಕ್ರಿಯೆಗೆ ಆಕ್ಷೇಪ ವ್ಯಕ್ತವಾಗಿದೆ .‘ಆಸ್ಪತ್ರೆ ಸ್ಥಾಪನೆಗೆ ಕ್ರಮವಹಿಸುತ್ತೀರಾ? ಹೆರಿಗೆಗೂ ಸಮಸ್ಯೆ ಇದೆ’ ಎಂದು ಪತ್ರಕರ್ತೆಯು ಸೆ. 1ರಂದು ಜೊಯಿಡಾ ತಾಲ್ಲೂಕಿನ ಸೂಪಾ ಜಲಾಶಯದ ಬಳಿ ದೇಶಪಾಂಡೆ ಅವರು ಸುದ್ದಿಗಾರರ ಜೊತೆ ಮಾತನಾಡುವಾಗ ಪ್ರಶ್ನಿಸಿದ್ದರು.
ಇದಕ್ಕೆ ‘ನಿನಗೆ ಹೆರಿಗೆಗೆ ಸಮಸ್ಯೆಯಾದರೆ ಹಳಿಯಾಳದಲ್ಲಿ ಹೆರಿಗೆ ಮಾಡಿಸಿಕೊಡುವೆ’ ಎಂದು ದೇಶಪಾಂಡೆ ಪ್ರತಿಕ್ರಿಯಿಸಿದರು. ಸದ್ಯ, ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಆಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.