ಸಾಯಿನಾಥ ಗಾಂವಕರ
ಶಿರಸಿ: ಗ್ಯಾರಂಟಿ ಯೋಜನೆ ಕುರಿತ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರ ಹೇಳಿಕೆಯನ್ನು ಕೆಲ ಮಾಧ್ಯಮಗಳು ಹಾಗೂ ವಿರೋಧ ಪಕ್ಷದವರು ತಿರುಚಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿರುವುದು ಖಂಡನೀಯ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಾಯಿನಾಥ ಗಾಂವಕರ ಆಕ್ಷೇಪಿಸಿದ್ದಾರೆ.
‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೂರದೃಷ್ಟಿ, ಬಡವ, ದೀನದಲಿತ, ಜನಸಾಮಾನ್ಯ, ರೈತ, ಕೂಲಿಕಾರ್ಮಿಕರ ಹೀಗೆ ಸಂಕಷ್ಟದಲ್ಲಿದ್ದವರ ಸಮಸ್ಯೆಗಳಿಗೆ ಸ್ಪಂದಿಸುವ
ವಿಚಾರಧಾರೆಗಳಿಂದಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜಾಗತಿಕ ಮಟ್ಟದಲ್ಲಿ ಪ್ರಭಾವವನ್ನು ಹೊಂದುವಂತಾಗಿದೆ. ಇಂತಹ ಯೋಜನೆಯನ್ನು ಜಾರಿಗೆ ತರಲು ಸಿದ್ದರಾಮಯ್ಯನವರಿಂದ ಮಾತ್ರ ಸಾಧ್ಯ ಎಂದು ಹೇಳಿದ್ದರು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಒಂದು ವೇಳೆ ನಾನೇ ಮುಖ್ಯಮಂತ್ರಿಯಾದರೂ ಪಂಚ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಕ್ಕೆ ತರುವುದು ಅಷ್ಟು ಸುಲಭದ ಕೆಲಸವಲ್ಲ ಎಂಬುದು ಅವರ ಹೇಳಿಕೆಯ ಅರ್ಥವಾಗಿತ್ತು. ಇಂಥ ಅರ್ಥಪೂರ್ಣ ಸಂದೇಶವನ್ನು ಅಪಾರ್ಥ ಮಾಡಿದವರ ನಡೆ ಖಂಡನೀಯ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.