ಕಾರವಾರ: ‘ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಇರಲಿದ್ದು, ಅವರನ್ನು ಬದಲಿಸುವ ಬಗ್ಗೆ ಶಾಸಕಾಂಗ ಸಭೆಯಲ್ಲಿ ಚರ್ಚೆಯಾಗಿಲ್ಲ’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.
‘ಸಿದ್ದರಾಮಯ್ಯ ಸರ್ಕಾರಕ್ಕೆ ಹೈಕಮಾಂಡ್ ಸಂಪೂರ್ಣ ಬೆಂಬಲವಿದ್ದು, ಸರ್ಕಾರದಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂಬ ಬೇಸರ ಕೆಲ ಶಾಸಕರಲ್ಲಿದೆ. ಇನ್ನೂ ಕೆಲವರಿಗೆ ಸಚಿವ ಅಥವಾ ಅಧ್ಯಕ್ಷನಾಗುವ ಆಸೆ ಇರಬಹುದು. ಅವೆಲ್ಲವನ್ನೂ ಮಾಧ್ಯಮದ ಎದುರು ಹೇಳಿಕೊಳ್ಳುವುದು ಸರಿಯಲ್ಲ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಗೊತ್ತಿಲ್ಲ. ಸತೀಶ್ ಜಾರಕಿಹೊಳಿ ಒಳ್ಳೆ ವ್ಯಕ್ತಿ. ಅವರಿಗೆ ಅಧ್ಯಕ್ಷ ಸ್ಥಾನ ಸಿಗುವುದೋ, ಇಲ್ಲವೋ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.