ADVERTISEMENT

ಅಧಿವೇಶನ ಬೆಳಗಾವಿ ಬದಲು ಬೆಂಗಳೂರಿನಲ್ಲೇ ಸೂಕ್ತ: ಆರ್.ವಿ. ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 13:00 IST
Last Updated 1 ಡಿಸೆಂಬರ್ 2021, 13:00 IST
ಆರ್.ವಿ.ದೇಶಪಾಂಡೆ
ಆರ್.ವಿ.ದೇಶಪಾಂಡೆ   

ಕಾರವಾರ: ‘ರಾಜ್ಯದ ಗಡಿಜಿಲ್ಲೆಗಳಲ್ಲಿ ಕೋವಿಡ್ ದೃಢಪಡುತ್ತಿರುವುದು ಹೆಚ್ಚಾಗುತ್ತಿವೆ. ಹಾಗಾಗಿ ಅಧಿವೇಶನವನ್ನು ಬೆಳಗಾವಿಯಲ್ಲಿ ಹಮ್ಮಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನಃ ಪರಿಶೀಲಿಸಲಿ. ಬೆಳಗಾವಿಯ ಬದಲು ಬೆಂಗಳೂರಿನಲ್ಲೇ ನಡೆಸುವುದು ಸೂಕ್ತ’ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯು ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದೆ. ಇದರಿಂದ ಸಮಸ್ಯೆ ಎದುರಾಗಬಹುದು. ಅಧಿವೇಶನಕ್ಕೆ ಸಾವಿರಾರು ಜನರು ಬರುತ್ತಾರೆ. ಕೋವಿಡ್ ಆತಂಕವು ಈಗಾಗಲೇ ಇದೆ. ಹಾಗಾಗಿ ಸುವರ್ಣಸೌಧದಲ್ಲಿ ಅಧಿವೇಶನ ಆಯೋಜಿಸುವ ಬಗ್ಗೆ ಸರ್ಕಾರ ಯೋಚಿಸಬೇಕು’ ಎಂದು ಮನವಿ ಮಾಡಿದರು.

ಇದೇವೇಳೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ 12 ಸದಸ್ಯರನ್ನು ಅಮಾನತು ಮಾಡಿರುವುದನ್ನು ಖಂಡಿಸಿದ ಅವರು, ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.