ADVERTISEMENT

ಸಾತೊಡ್ಡಿ ಜಲಪಾತ | ನೀರಿಗೆ ಇಳಿಯದಂತೆ ಪ್ರವಾಸಿಗರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಮೇ 2023, 1:58 IST
Last Updated 10 ಮೇ 2023, 1:58 IST
 ಯಲ್ಲಾಪುರ ತಾಲ್ಲೂಕಿನ ಸಾತೊಡ್ಡಿ ಜಲಪಾತ
ಯಲ್ಲಾಪುರ ತಾಲ್ಲೂಕಿನ ಸಾತೊಡ್ಡಿ ಜಲಪಾತ   

ಯಲ್ಲಾಪುರ: ತಾಲ್ಲೂಕಿನ ಸಾತೊಡ್ಡಿ ಜಲಪಾತಕ್ಕೆ ಆಗಮಿಸುವ ಪ್ರವಾಸಿಗರು ಮಧ್ಯಾಹ್ನದ ನಂತರ ನೀರಿಗಿಳಿಯಬಾರದು ಎಂದು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ನಾರಾಯಣ ಭಟ್ಟ ಕಂಚಿನಗದ್ದೆ ಮನವಿ ಮಾಡಿದ್ದಾರೆ.

ತಾಲ್ಲೂಕಿನಲ್ಲಿ ನಿತ್ಯ ಅಲ್ಲಲ್ಲಿ ಮಳೆ ಬೀಳುತ್ತಿರುವ ಕಾರಣ ಸಾತೊಡ್ಡಿ ಜಲಪಾತದಲ್ಲಿ ಏಕಾಏಕಿ ನೀರು ಹರಿದು ಬರಬಹುದು. ಸಂಜೆಯ ವೇಳೆ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಪ್ರವಾಸಿಗರು ನೀರಿಗಿಳಿಯಬಾರದು ಎಂದು ಅವರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT