ADVERTISEMENT

ಶಾಲೆಯ ಕೊಠಡಿ ದುರಸ್ತಿಗೆ ಮಂಜೂರಾಗಿದ್ದ ಅನುದಾನಕ್ಕೆ ತಡೆ

ಭಾನ್ಕುಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳು ಸಂಪೂರ್ಣ ಶಿಥಿಲ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2018, 13:51 IST
Last Updated 9 ನವೆಂಬರ್ 2018, 13:51 IST
ಸಿದ್ದಾಪುರ ತಾಲ್ಲೂಕಿನ ಭಾನ್ಕುಳಿ (ಹುಲಿಮನೆ) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ
ಸಿದ್ದಾಪುರ ತಾಲ್ಲೂಕಿನ ಭಾನ್ಕುಳಿ (ಹುಲಿಮನೆ) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ   

ಸಿದ್ದಾಪುರ:‘ತಾಲ್ಲೂಕಿನ ಭಾನ್ಕುಳಿ (ಹುಲಿಮನೆ) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ.ಕೊಠಡಿ ನಿರ್ಮಾಣಕ್ಕೆ ಮಂಜೂರಾಗಿದ್ದ ಅನುದಾನವನ್ನು ತಡೆಹಿಡಿಯಲಾಗಿದೆ’ ಎಂದು ಶಾಲೆಯಶಾಲಾಭಿವೃದ್ಧಿ ಸಮಿತಿಯ ಪ್ರಮುಖರುಬೇಸರ ವ್ಯಕ್ತಪಡಿಸಿದ್ದಾರೆ.

‘ನಮ್ಮ ಶಾಲೆಯಲ್ಲಿ ಒಂದರಿಂದ ಐದನೇ ತರಗತಿ ಇದ್ದು, 22 ವಿದ್ಯಾರ್ಥಿಗಳಿದ್ದಾರೆ. ಕಟ್ಟಡದಲ್ಲಿರುವ ಎರಡೂಕೊಠಡಿಗಳು ಶಿಥಿಲವಾಗಿವೆ. ಒಂದು ಕೊಠಡಿಯ ನಾಲ್ಕೂ ಗೋಡೆಗಳುಬಿರುಕು ಬಿಟ್ಟಿದ್ದು, ಮತ್ತೊಂದರ ಚಾವಣಿಯ ಜಂತಿಗಳು ಹಾಳಾಗಿವೆ. ಇದ್ದುದರಲ್ಲಿಯೇ ಸ್ವಲ್ಪ ಉತ್ತಮವಾಗಿರುವ ಕೊಠಡಿಯಲ್ಲಿ ಶಾಲೆ ನಡೆಸುತ್ತಿದ್ದೇವೆ. ಮಳೆಗಾಲದಲ್ಲಿ ರಂಗಮಂದಿರದಲ್ಲಿ ಮಕ್ಕಳಿಗೆ ತರಗತಿ ನಡೆಸಲಾಗಿದೆ’ ಎಂದುಸಮಿತಿಯಅಧ್ಯಕ್ಷ ರಾಘವೇಂದ್ರ ನಾಯ್ಕ ಸಮಸ್ಯೆ ವಿವರಿಸಿದರು.

‘ಈ ಶಾಲೆಯ ಕೊಠಡಿಗಳ ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ₹17.40 ಲಕ್ಷ ಅನುದಾನ ಮಂಜೂರಾಗಿತ್ತು. ಶಿಥಿಲ ಕಟ್ಟಡ ಕೆಡವಲು ಟೆಂಡರ್ ಕೂಡ ಆಗಿತ್ತು. ಆ ಸಂದರ್ಭದಲ್ಲಿಯೇ ಅನುದಾನವನ್ನು ತಡೆ ಹಿಡಿಯಲಾಗಿದೆ ಎಂಬ ವಿಷಯ ತಿಳಿಸಲಾಯಿತು. ಈ ಅನುದಾನದಒಂದು ಭಾಗವನ್ನುಹುತ್ಗಾರ ಶಾಲೆಗೆ ವರ್ಗಾವಣೆ ಮಾಡಲಾಗಿದೆ ಎಂದೂ ತಿಳಿದುಬಂದಿದೆ. ಈ ವಿಷಯವನ್ನು ನಮ್ಮ ಭಾಗದ ಜಿಲ್ಲಾ ಪಂಚಾಯ್ತಿ ಸದಸ್ಯರಿಗೆ ಹಾಗೂ ಶಿರಸಿ–ಸಿದ್ದಾಪುರ ಕ್ಷೇತ್ರದ ಶಾಸಕರಿಗೆ ತಿಳಿಸಿದ್ದೇವೆ. ಆದರೆ, ಹಣ ಬಿಡುಗಡೆಯ ಬಗ್ಗೆ ಅವರಿಂದ ಖಚಿತ ಭರವಸೆ ಸಿಕ್ಕಿಲ್ಲ’ ಎಂದು ಹೇಳಿದರು.

ADVERTISEMENT

ಈ ಕುರಿತುಕ್ಷೇತ್ರ ಶಿಕ್ಷಣಾಧಿಕಾರಿವಿ.ಆರ್.ನಾಯ್ಕ ಅವರನ್ನು ಸಂಪರ್ಕಿಸಿದಾಗ, ‘ಶಾಸಕರ ಅಭಿವೃದ್ಧಿ ನಿಧಿಯಿಂದ ಮಂಜೂರಾಗಿದ್ದ ಈ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಮಾಡಬೇಕಾಗಿತ್ತು. ಆದರೆ, ಕಾಮಗಾರಿ ಆರಂಭಗೊಳ್ಳದ ಕಾರಣ ಅನುದಾನವನ್ನು ತಡೆ ಹಿಡಿದುಬೇರೆ ಶಾಲೆಗೆ ವರ್ಗಾವಣೆ ಮಾಡಲಾಗಿದೆ. ಈ ಶಾಲೆಯ ಕಟ್ಟಡ ದುರಸ್ತಿ ಅಥವಾ ಪುನರ್ ನಿರ್ಮಾಣಕ್ಕೆ ಬೇರೆ ಅನುದಾನ ಇದುವರೆಗೆ ಮಂಜೂರಾಗಿಲ್ಲ’ ಎಂದು ಪ್ರತಿಕ್ರಿಯೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.